Site icon Suddi Belthangady

ಉಜಿರೆ ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿಗೆ ಕ್ರೀಡಾ ಪ್ರಶಸ್ತಿ

ಉಜಿರೆ: ವಿಭಾಗದ ನೆಟ್‌ಬಾಲ್ ಪಂದ್ಯಾಕೂಟದಲ್ಲಿ ಉಜಿರೆಯ ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು ಮತ್ತು ರಾಜ್ಯ ಮಟ್ಟದ ನೆಟ್‌ಬಾಲ್ ಪಂದ್ಯಾಕೂಟದಲ್ಲಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.ಹಾಗೂ ಮಂಗಳೂರು ವಿಭಾಗದ ಹ್ಯಾಂಡ್‌ಬಾಲ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನವನ್ನು ಗೆದ್ದಿರುವರು.ಕ್ರೀಡಾಪಟುಗಳಿಗೆ ದೈಹಿಕ ಶಿಕ್ಷಣ ನಿರ್ದೇಶಕರಾದ ಪ್ರಭಾಕರ್ ಹಾಗೂ ನಿತಿನ್ ಮಾರ್ಗದರ್ಶನವನ್ನು ನೀಡಿರುತ್ತಾರೆ.

ವಿದ್ಯಾರ್ಥಿಗಳ ಈ ಸಾಧನೆಯನ್ನು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಹಾಗೂ ಕಾರ್ಯದರ್ಶಿಗಳಾದ ಶ್ರೀ ಹರ್ಷೇಂದ್ರ ಕುಮಾರ್ ಮತ್ತು ಡಾ.ಸತೀಶ್ಚಂದ್ರರವರು, ಕಾಲೇಜಿನ ಪ್ರಾಂಶುಪಾಲರಾದ ಡಾ.ಅಶೋಕ್ ಕುಮಾರ್ ಪ್ರಶಂಶಿಸಿ, ಶುಭ ಹಾರೈಸಿದರು.

Exit mobile version