ಉಜಿರೆ :ಪ್ರಗತಿ ಮಹಿಳಾ ಮಂಡಲ (ರಿ)ಉಜಿರೆ ಇದರ ವತಿಯಿಂದ ಗ್ರಾಮಪಂಚಾಯತ್ ನ ಪ್ರೇರಣಾ ಸಭಾಂಗಣದಲ್ಲಿ 10 ದಿನಗಳ ಮಕ್ಕಳ ಬೇಸಿಗೆ ಶಿಬಿರವು ಪ್ರಾರಂಭವಾಯಿತು. ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡ್ವೆಟ್ಣಾಯ ದೀಪ ಬೆಳಗಿಸಿ ಉದ್ಘಾಟಿಸಿ ಇಂತಹ ಶಿಬಿರಗಳು ಮಕ್ಕಳ ಸೃಜನಾತ್ಮಕ ಬೆಳವಣಿಗೆಗೆ ಪೂರಕವಾಗಿರುತ್ತದೆ ಎಂದು ಹೇಳಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು.
ಈ ಸಂಧರ್ಭದಲ್ಲಿ ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಗೌರವಾಧ್ಯಕ್ಷೆ ಶ್ರೀಮತಿ ಲೋಕೇಶ್ವರೀ ವಿನಯಚಂದ್ರ ಅವರು ಕಾರ್ಯಕ್ರಮ ಕ್ಕೆ ಶುಭ ಹಾರೈಸಿದರು. ವೇದಿಕೆಯಲ್ಲಿ ಪ್ರಗತಿ ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ಜಯಶ್ರೀ ಪ್ರಕಾಶ್, ಕಾರ್ಯದರ್ಶಿ ಶ್ರೀಮತಿ ಗಾಯತ್ರಿ ಶ್ರೀಧರ್ ಅವರುಗಳು ಉಪಸ್ಥಿತರಿದ್ದರು.
ಶ್ರೀಮತಿ ಭವ್ಯಶ್ರೀ ಕೀರ್ತಿರಾಜ್ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಈ ಶಿಬಿರದಲ್ಲಿ ಸುಮಾರು 75 ಕ್ಕೂ ಅಧಿಕ ಮಕ್ಕಳು ಭಾಗವಹಿಸುತ್ತಿದ್ದಾರೆ. ಪ್ರತಿದಿನ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ವಿವಿಧ ರೀತಿಯ ತರಬೇತಿಗಳನ್ನು ನೀಡಲಾಗುತ್ತದೆ.