





ಬೆಳ್ತಂಗಡಿ: ರಾಜ್ಯ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಕ್ಕೆ ಹರೀಶ್ ಪೂಂಜರವರಿಗೆ ಮತ್ತೆ ಅವಕಾಶ ಕಲ್ಪಿಸಲಾಗಿದೆ. ಆಂತರಿಕ ಅಭಿಪ್ರಾಯ ಸಂಗ್ರಹದ ನಂತರ ಹರೀಶ್ ಪೂಂಜರವರ ಹೆಸರನ್ನು ಫೈನಲ್ ಮಾಡಲಾಗಿದೆ.
ಹರೀಶ್ ಪೂಂಜ 2018ರಲ್ಲಿ ಮೊದಲ ಬಾರಿಗೆ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿ ಅಂದಿನ ಎದುರಾಳಿ ವಸಂತ ಬಂಗೇರ ಎದುರು ಭರ್ಜರಿ ಗೆಲುವು ಕಂಡಿದ್ದರು. ಈ ಬಾರಿ ಎರಡನೇ ಸಲ ಮತ್ತೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.








