Site icon Suddi Belthangady

ಎಪ್ರಿಲ್ 18ರಂದು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ SDPI ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ನಾಮಪತ್ರ ಸಲ್ಲಿಕೆ

ಬೆಳ್ತಂಗಡಿ (ಎ -14): ಎಪ್ರಿಲ್ 18 ಮಂಗಳವಾರದಂದು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಅವರು ಸಹಸ್ರಾರು ಕಾರ್ಯಕರ್ತರೊಂದಿಗೆ ಆಗಮಿಸಿ ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು SDPI ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾದ ನವಾಝ್ ಕಟ್ಟೆ ತಿಳಿಸಿದ್ದಾರೆ.

ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಸರಿಯಾಗಿ ಬೆಳ್ತಂಗಡಿ ಸಂತೆಕಟ್ಟೆಯಿಂದ ಮಿನಿ ವಿಧಾನಸೌಧವರೆಗೆ ಕಾಲ್ನಡಿಗೆ ಜಾಥಾದಲ್ಲಿ ಸಹಸ್ರಾರು ಕಾರ್ಯಕರ್ತರು, ಹಿತೈಷಿಗಳು ಭಾಗವಹಿಸಲಿದ್ದಾರೆ, ಬಳಿಕ ಅಕ್ಬರ್ ಬೆಳ್ತಂಗಡಿಯವರು ಚುನಾವಣಾಧಿಕಾರಿಗೆ ನಾಮ ಪತ್ರ ಸಲ್ಲಿಸಲಿದ್ದಾರೆ ಎಂದು ನವಾಝ್ ಕಟ್ಟೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version