Site icon Suddi Belthangady

ತಾಲೂಕು ಆಡಳಿತ ವತಿಯಿಂದ ಅಂಬೇಡ್ಕರ್ ಜನ್ಮ ದಿನಾಚರಣೆ

ಬೆಳ್ತಂಗಡಿ: ತಾಲೂಕು ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಾಲೂಕು ಆಡಳಿತ, ತಾಲೂಕು ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಪಟ್ಟಣ ಪಂಚಾಯತ್ ಸಂಯುಕ್ತ ಆಶ್ರಯದಲ್ಲಿ ಭಾರತ ರತ್ನ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಬಿ.ಆರ್.ಅಂಬೇಡ್ಕರ್ ರವರ 132 ನೇ ಜನ್ಮ ದಿನಾಚರಣೆಯನ್ನು ಎ.14 ರಂದು ಮಿನಿ ವಿಧಾನ ಸಭಾ ಸಭಾಂಗಣದಲ್ಲಿ ಆಚರಿಸಲಾಯಿತು.

ತಹಶೀಲ್ದಾರ್ ಸುರೇಶ್ ಕುಮಾರ್.ಟಿ, ಚುನಾವಣಾಧಿಕಾರಿ ಯೋಗೀಶ್ ಎಚ್.ಆರ್., ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಬಿ. ಕುಸುಮಾಧರ್, ಪೊಲೀಸ್ ವೃತ್ತ ನಿರೀಕ್ಷಕ ಶಿವಕುಮಾರ್ ಬಿ., ಕೊಯ್ಯೂರು ಸರಕಾರಿ ಪ್ರೌಢ ಶಾಲಾ ಮುಖ್ಯ ಶಿಕ್ಷಕ ರಾಧಾಕೃಷ್ಣ ಟಿ., ಪಟ್ಟಣ ಪಂಚಾಯತ್ ಮುಖ್ಯ ಅಧಿಕಾರಿ ನಟರಾಜ್,ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಹೇಮಚಂದ್ರ, ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದರು.ಸಮಾಜ ಕಲ್ಯಾಣ ಇಲಾಖೆಯು ಹೇಮಲತಾ ನಿರೂಪಿಸಿ, ತಾ.ಪಂ.ಸಂಯೋಜಕ ಜಯಾನಂದ ಲಾಯಿಲ ವಂದಿಸಿದರು.

Exit mobile version