ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಎಸ್.ಡಿ.ಎಂ ರೋಟರಿ ವೃತ್ತಿ ಮಾರ್ಗದರ್ಶನ ಮತ್ತು ಮಾನವ ಸಂಪನ್ಮೂಲ ಕೇಂದ್ರವು ಆಯೋಜಿಸಿದ್ದ ಡಿಜಿಟಲ್ ಲಿಟ್‌ರೆಸಿ ಕಾರ್ಯಕ್ರಮದ ಅಡಿಯಲ್ಲಿ ಎಂ.ಎಸ್.ಎಕ್ಸೆಲ್ ಕುರಿತು ಮೂರು ದಿನಗಳ ತರಬೇತಿ ಕಾರ್ಯಾಗಾರವನ್ನು ಬಿ.ಕಾಮ್ ಮತ್ತು ಬಿಬಿಎ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಗಿತ್ತು.
ಎರಡು ಹಂತಗಳಲ್ಲಿ ನಡೆದ ಕಾರ್ಯಾಗಾರದಲ್ಲಿ ಒಟ್ಟು ೧೪೨ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಶ್ರೀ ಎನ್.ಆರ್ ಬೆಟ್ಟಕೊಪ್ಪ ಮತ್ತು ರಾಜು ಭಟ್ ಭಾಗವಹಿಸಿದ್ದರು.ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಎ.ಕುಮಾರ ಹೆಗ್ಡೆಯವರ ಮಾರ್ಗದರ್ಶನದಲ್ಲಿ ಡಾ.ನಾಗರಾಜ ಪೂಜಾರಿ ಮತ್ತು ಹರೀಶ್ ಶೆಟ್ಟಿಯವರ ತಂಡವು ಯಶಸ್ವಿಯಾಗಿ ತರಬೇತಿ ಕಾರ್ಯಾಗಾರವನ್ನು ಸಂಘಟಿಸಿದರು.