ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜ್‌ನಲ್ಲಿ ಎಸ್‌ಡಿಎಂ ರೋಟರಿ ವೃತ್ತಿ ಮಾರ್ಗದರ್ಶನ ಮತ್ತು ಮಾನವ ಸಂಪನ್ಮೂಲ ಕೇಂದ್ರ ಆಯೋಜಿಸಿದ್ದ ಡಿಜಿಟಲ್ ಲಿಟ್‌ರೆಸಿ ಕಾರ್ಯಕ್ರಮದಡಿಯಲ್ಲಿ ಕೃತಕ ಬುದ್ಧಿಮತ್ತೆ ಮತ್ತು ದತ್ತಾಂಶ ವಿಜ್ಞಾನ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಬಿಬಿಎ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿತ್ತು. ೬೨ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸಂಪನ್ಮೂಲ ವ್ಯಕ್ತಿಗಳಾಗಿ ಕೃತಕ ಬುದ್ಧಿವಂತಿಕೆ ವಿಭಾಗದ ವರಿಷ್ಠರಾಗಿರುವ ಡಾ. ತ್ಯಾಗರಾಜ್, ವಿದಾರ್ಥಿಗಳಿಗೆ ಕೃತಕ ಬುದ್ಧಿಮತ್ತೆ ಮತ್ತು ದತ್ತಾಂಶ ವಿಜ್ಞಾನ ಆಧರಿತ ಉದ್ಯೋಗ ಮತ್ತು ಉನ್ನತ ಶಿಕ್ಷಣದ ಅವಕಾಶದ ಕುರಿತು ಮಾಹಿತಿ ನೀಡಿ ಕೃತಕ ಬುದ್ಧಿಮತ್ತೆ ಮತ್ತು ದತ್ತಾಂಶ ವಿಜ್ಞಾನ ಕ್ಷೇತ್ರ ಭವಿಷ್ಯದಲ್ಲಿ ಸಮಾಜಕ್ಕೆ ಹೇಗೆ ಪ್ರಯೋಜನಕಾರಿ ಎಂಬ ವಿಷಯದ ಕುರಿತು ಮನವರಿಕೆ ಮಾಡಿಕೊಟ್ಟರು.
ಪ್ರಾಂಶುಪಾಲ ಡಾ. ಬಿ.ಎ ಕುಮಾರ ಹೆಗ್ಡೆಯವರ ಮಾರ್ಗದರ್ಶನದಲ್ಲಿ ಡಾ. ನಾಗರಾಜ ಪೂಜಾರಿ ಮತ್ತು ಹರೀಶ ಶೆಟ್ಟಿ ಯವರ ತಂಡ ತರಬೇತಿ ಕಾರ್ಯಾಗಾರ ನಿರ್ವಹಿಸಿದ್ದರು.