Site icon Suddi Belthangady

ಅಪ್ರಾಪ್ತೆಯನ್ನು ಗರ್ಭಿಣಿಯನ್ನಾಗಿಸಿದಾತ ಸೆರೆ

ವೇಣೂರು: ಅಪ್ರಾಪ್ತೆಯನ್ನು ಗರ್ಭವತಿಯನ್ನಾಗಿ ಮಾಡಿದ ನಾರಾವಿಯ ಮಂಜುನಗರ ನಿವಾಸಿ ಸಂದೇಶ್ (೨೩)ನನ್ನು ಪೊಲೀಸರು ಬಂಧಿಸಿದ್ದಾರೆ.ಪರಿಚಯಸ್ಥ ದ್ವಿತೀಯ ಪಿಯುಸಿ ವಿದ್ಯಾರ್ಥಿಯ ಜತೆ ಸಲುಗೆ ಬೆಳೆಸಿದ್ದ ಸಂದೇಶ್ ಆಕೆಯ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ದೈಹಿಕ ಸಂಪರ್ಕ ಬೆಳೆಸಿದ್ದ.ಬಾಲಕಿಯ ಆರೋಗ್ಯದಲ್ಲಿ ಬದಲಾವಣೆ ಕಂಡಾಗ ಹೆತ್ತವರು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಿದ್ದು, ಬಾಲಕಿ ಎರಡು ತಿಂಗಳ ಗರ್ಭಿಣಿ ಆಗಿರುವುದು ಬೆಳಕಿಗೆ ಬಂದಿದೆ.ಪೋಕ್ಸೋ ಅನ್ವಯ ಪ್ರಕರಣ ದಾಖಲಿಸಿಕೊಂಡಿದ್ದ ವೇಣೂರು ಠಾಣೆ ಪೊಲೀಸರು ಗುರುವಾರ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Exit mobile version