ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಎಸ್.ಡಿ.ಪಿ.ಐ. ಅಭ್ಯರ್ಥಿ ಅಕ್ಬರ್ ಅವರು ಎ.18ರಂದು ನಾಮಪತ್ರ ಸಲ್ಲಿಸುವುದಾಗಿ ತಿಳಿಸಿದ್ದಾರೆ.ಅಕ್ಬರ್ ಅವರು ಎ.17ರಂದು ನಾಮಪತ್ರ ಸಲ್ಲಿಸಲು ನಿರ್ಧರಿಸಿದ್ದರು. ಆದರೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮತ್ತು ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಅವರು ಎ.17ರಂದು ನಾಮಪತ್ರ ಸಲ್ಲಿಸಲಿರುವುದರಿಂದ ಸಾವಿರಾರು ಸಂಖ್ಯೆಯಲ್ಲಿ ಜನರು ಸೇರುವ ಹಿನ್ನೆಲೆಯಲ್ಲಿ ಅಕ್ಬರ್ ಅವರು ನಾಮಪತ್ರ ಸಲ್ಲಿಸುವುದನ್ನು ಒಂದು ದಿನ ಮುಂದೂಡಿದ್ದಾರೆ.