Site icon Suddi Belthangady

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ನಾಮಪತ್ರ ಸಲ್ಲಿಕೆ

ಬೆಳ್ತಂಗಡಿ: ವಿಧಾನಸಭಾ ಚುನಾವಣೆಗೆ ಬೆಳ್ತಂಗಡಿ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ, ಶಾಸಕ ಹರೀಶ್ ಪೂಂಜರವರು ಎ.೧೭ರಂದು ಬೆಳ್ತಂಗಡಿ ಚುನಾವಣಾ ಅಧಿಕಾರಿ ಯೋಗೇಶ್.ಹೆಚ್.ಆರ್ ಅವರಿಗೆ ನಾಮಪತ್ರ ಸಲ್ಲಿಸಿದರು.


ವಿಧಾನ ಪರಿಷತ್ ಸದಸ್ಯ ಪ್ರತಾಪ್‌ಸಿಂಹ ನಾಯಕ್, ಬಿಜೆಪಿ ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್, ಹಿರಿಯ ವಕೀಲ ಸುಬ್ರಹ್ಮಣ್ಯ ಕುಮಾರ್ ಅಗರ್ತ ಮತ್ತು ಹಿರಿಯ ಮುಂದಾಳು ಕುಶಾಲಪ್ಪ ಗೌಡ ಪೂವಾಜೆ ಉಪಸ್ಥಿತರಿದ್ದರು.ಸಾವಿರಾರು ಮಂದಿಯ ಸಮ್ಮುಖದಲ್ಲಿ ಹರೀಶ್ ಪೂಂಜರವರು ಚುನಾವಣಾಧಿಕಾರಿ ಕಚೇರಿಯವರೆಗೆ ಮೆರವಣಿಗೆಯಲ್ಲಿ ಬಂದು ಬಳಿಕ ನಾಮಪತ್ರ ಸಲ್ಲಿಸಿದರು.

Exit mobile version