


ಬೆಳ್ತಂಗಡಿ: ಮಾಜಿ ಶಾಸಕ ವಸಂತ ಬಂಗೇರ, ಗಂಗಾಧರ ಗೌಡ, ಅಭ್ಯರ್ಥಿ ರಕ್ಷಿತ್ ಶಿವರಾಂ, ಬ್ಲಾಕ್ ಅಧ್ಯಕ್ಷರುಗಳಾದ ಶೈಲೇಶ್ ಕುಮಾರ್ ಮತ್ತು ರಂಜನ್ ಗೌಡರವರ ಶಿಫಾರಸ್ತಿನ ಮೇರೆಗೆ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಗೆ ಸತೀಶ್ ಕಾಶಿಪಟ್ಣ, ಪ್ರವೀಣ್ ವಿ.ಜಿ.ನಡ, ನಗರ ಬ್ಲಾಕ್ ಕಾಂಗ್ರೆಸ್ ಗೆ ಕೆ.ಸಾಹುಲ್ ಹಮೀದ್ ಮತ್ತು ಪ್ರಶಾಂತ್ ವೇಗಸ್ ರವರನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ರವರು ಬ್ಲಾಕ್ ಕಾಂಗ್ರೆಸ್ ಉಸ್ತುವಾರಿಯಾಗಿ ನೇಮಕ ಮಾಡಿ ಆದೇಶ ಮಾಡಿರುತ್ತಾರೆ.