Site icon Suddi Belthangady

2024ರ ಫೆಬ್ರವರಿಯಲ್ಲಿ ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ-ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಘೋಷಣೆ

ಉಜಿರೆ: ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ 2024ರ ಫೆಬ್ರವರಿ ತಿಂಗಳಲ್ಲಿ ನಡೆಯಲಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಘೋಷಿಸಿದ್ದಾರೆ.

ಸಿದ್ಧವನ ಗುರುಕುಲದಲ್ಲಿ ನಡೆದ ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕದ ಪೂರ್ವತಯಾರಿ ಸಮಾಲೋಚನಾ ಸಭೆಯಲ್ಲಿ ದಿನಾಂಕದ ಘೋಷಣೆ ಮಾಡಿದರು. ಹತ್ತು ದಿವಸಗಳ ಕಾಲ ಮಹಾಮಸ್ತಕಾಭಿಷೇಕ ನಡೆಯಲಿದ್ದು, ರಾತ್ರಿಯ ವೇಳೆಯೆ ಕಾರ್ಯಕ್ರಮಗಳು ನಡೆಯಲಿವೆ ಎಂದರು.

ಮೂಡಬಿದ್ರೆ ಜೈನ ಮಠದ ಮಹಾಸ್ವಾಮೀಜಿ ಡಾ.ಚಾರುಕೀರ್ತಿ ಭಟ್ಟಾರಕರು ಮಾತನಾಡಿ” ಮಹಾ ಮಸ್ತಕಾಭಿಷೇಕದ ಅಧ್ಯಕ್ಷತೆಯನ್ನು ಡಾ.ಡಿ.ವೀರೇಂದ್ರ ಹೆಗ್ಗಡೆಯವರು ವಹಿಸಲಿದ್ದಾರೆ ಎಂದು ತಿಳಿಸಿದರು.

ಸಮಾಲೋಚನಾ ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಅಳದಂಗಡಿ ಅರಮನೆಯ ಅರಸರಾದ ಡಾ. ಪದ್ಮಪ್ರಸಾದ ಅಜಿಲರು ಪ್ರಾಸ್ತಾವಿಕವಾಗಿ ಮಾತನಾಡಿ” ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ, ಮೂಡಬಿದ್ರೆ ಡಾ.ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರ ಧಾರ್ಮಿಕ ವಿಧಿ ವಿಧಾನಗಳು ನಡೆಯಲಿವೆ. ರಾಜ್ಯಮಟ್ಟದ ಸಮಿತಿ ರಚನೆ ಮಾಡುತ್ತೇವೆ ಎಂದರು.
ಸಭೆಯಲ್ಲಿ ಸುರೇಂದ್ರ ಕುಮಾರ್,ಪ್ರವೀಣ್ ಕುಮಾರ್ ಇಂದ್ರ ಉಪಸ್ಥಿತರಿದ್ದರು

Exit mobile version