Site icon Suddi Belthangady

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಶೇ.74.67 ವಿದ್ಯಾರ್ಥಿಗಳು ಉತ್ತೀರ್ಣ, ದ.ಕ ಪ್ರಥಮ

ಬೆಳ್ತಂಗಡಿ: ೨೦೨೨-೨೩ನೇ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗಿದ್ದು, ಶೇ.74.64 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.ರಾಜ್ಯದಲ್ಲಿ ದ.ಕ ಪ್ರಥಮ ಸ್ಥಾನ ಪಡೆದಿದ್ದು, ಉಡುಪಿ ದ್ವಿತೀಯ ಸ್ಥಾನ ಪಡೆದಿದೆ.
ವಿಜ್ಞಾನ ವಿಭಾಗದಲ್ಲಿ ಶೇ.85.71, ವಾಣಿಜ್ಯ ವಿಭಾಗದಲ್ಲಿ ಶೇ.75.89, ಕಲಾ ವಿಭಾಗದಲ್ಲಿ ಶೇ.61.22 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ(ಶೇ.95) ಪ್ರಥಮ ಸ್ಥಾನ ಪಡೆದುಕೊಂಡಿದೆ. ಉಡುಪಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ.

7,02,067 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಅವರಲ್ಲಿ 5,24,209 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ‌. ಶೇ 80.72 ವಿದ್ಯಾರ್ಥಿನಿಯರು ಹಾಗೂ ಬಾಲಕರು ಶೇ.69.05 ಸಾಧಿಸಿದ್ದಾರೆ.

Exit mobile version