ಶ್ರೀ ಧ.ಮಂ.ಕಾಲೇಜು ಉಜಿರೆಯಲ್ಲಿ “ ಉದ್ಯೋಗ ಕೌಶಲ್ಯಗಳು ಮತ್ತು ಅವಕಾಶಗಳು” ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮ

0

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆ ಯಲ್ಲಿ ಎಸ್ ಡಿ ಎಂ ರೋಟರಿ ವೃತ್ತಿ ಮಾರ್ಗ ದರ್ಶನ ಮತ್ತು ಮಾನವ ಸಂಪನ್ಮೂಲ ಕೇಂದ್ರವು ಆಯೋಜಿಸಿದ್ದ “ಉದ್ಯೋಗ ಕೌಶಲ್ಯಗಳು ಮತ್ತು ಅವಕಾಶಗಳು” ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಗಿತ್ತು.ಉಪನ್ಯಾಸ ಕಾರ್ಯಕ್ರಮದಲ್ಲಿ ಒಟ್ಟು 62 ವಿದ್ಯಾರ್ಥಿಗಳು ಭಾಗವಹಿಸಿ ಪ್ರಯೋಜನವನ್ನು ಪಡೆದುಕೊಂಡರು.

ಸಂಪನ್ಮೂಲ ವ್ಯಕ್ತಿಗಳಾಗಿ FOSROC Constructive Solutions ಸಂಸ್ಥೆಯ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥರಾದ ಡಾ ಪ್ರಸಾದ್ ಮ್ ಎನ್ ರವರು ಉದ್ಯೋಗ ಕೌಶಲ್ಯಗಳು ಮತ್ತು ಅವಕಾಶಗಳು ವಿಚಾರದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ ಬಿ.ಎ.ಕುಮಾರ ಹೆಗಡೆ ಅಧ್ಯಕ್ಷೀಯ ಭಾಷಣದಲ್ಲಿ ನಮ್ಮ ಕಾಲೀಜಿನಲ್ಲಿ ವಿದ್ಯಾರ್ಥಿಗಳ ಕೌಶಲ್ಯ ವೃದಿಗಾಗಿ ಕೈಗೊಂಡ ಕ್ರಮಗಳನ್ನು ವಿವರಿಸಿ ವಿದ್ಯಾರ್ಥಿಗಳು ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹಿತನುಡಿಗಳನ್ನು ಆಡಿದರು.ಮತ್ತು ಈ ಕಾರ್ಯಕ್ರಮದಲ್ಲಿ ಜೈವಿಕ ತಂತ್ರಜ್ಞಾನ ವಿಭಾಗದ ಮುಖ್ಯಸ್ಥ ಡಾ ಮಾರುತಿ ಪ್ರಾಸ್ತಾವಿಕ ಭಾಷಣ ಮಾಡಿದರು ಮತ್ತು ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಡಾ ನಾಗರಾಜ ಪೂಜಾರಿ ವಂದಿಸಿದರು.ಡಾ.ನಾಗರಾಜ ಪೂಜಾರಿ ಮತ್ತು ಹರೀಶ್ ಶೆಟ್ಟಿಯವರ ತಂಡವು ಯಶಸ್ವಿಯಾಗಿ ತರಬೇತಿ ಕಾರ್ಯಾಗಾರನ್ನು ಸಂಘಟಿಸಿ ನಿರ್ವಹಣೆ ಮಾಡಿದರು.

p>

LEAVE A REPLY

Please enter your comment!
Please enter your name here