


ನಿಡ್ಲೆ: ಬೆಳ್ತಂಗಡಿಯಲ್ಲಿ ವಿಧಾನಸಭೆಯ ಚುನಾವಣಾ ಕಾವು ಏರುತ್ತಿದೆ. ಇದರ ನಡುವೆ ಪಕ್ಷಾಂತರ ಮುಂದುವರೆಯುತ್ತಲೇ ಇದೆ. ಕಾಂಗ್ರೆಸ್ ಪಕ್ಷದಲ್ಲಿದ್ದ ನಿಡ್ಲೆಯ ಯೋಗೀಶ್ ಗೌಡ ನೂಜಿಲ ಇಂದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಶಾಸಕ,ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಹಾಗೂ ಬಿಜೆಪಿ ಮಂಡಲಾಧ್ಯಕ್ಷ ಜಯಂತ್ ಕೋಟ್ಯಾನ್ ಅವರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾದರು. ಈ ವೇಳೆ ಪಕ್ಷದ ಪ್ರಮುಖರು, ಸ್ಥಳೀಯ ಕಾರ್ಯಕರ್ತರು ಉಪಸ್ಥಿತರಿದ್ದರು,