ಉಜಿರೆ ಎಸ್ ಡಿ ಎಂ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಭೆ

0

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ವಿಶೇಷ ಸಭೆ ಏ. 22 ರಂದು ಕಾಲೇಜಿನ ಸಭಾಂಗಣದಲ್ಲಿ ಜರಗಿತು.
ಹಿರಿಯ ವಿದ್ಯಾರ್ಥಿಗಳ ಸಂಘದ ಕಾರ್ಯ ಚಟುವಟಿಕೆಗಳನ್ನು ಪರಾಮರ್ಶಿಸಿದ ಬಳಿಕ ಇದೆ ಬರುವ ಮೇ.01ನೇ ತಾರೀಖಿನಂದು ಹಿರಿಯ ವಿದ್ಯಾರ್ಥಿಗಳ ವಾರ್ಷಿಕ ಸ್ನೇಹ ಸಮ್ಮಿಲನ ಕಾರ್ಯಕ್ರಮವನ್ನು ಕಾಲೇಜಿನಲ್ಲಿ ಆಯೋಜಿಸಲು ತೀರ್ಮಾನಿಸಲಾಯಿತು.
ಗರಿಷ್ಠ ಸಂಖ್ಯೆಯಲ್ಲಿ ಹಿರಿಯ ವಿದ್ಯಾರ್ಥಿಗಳನ್ನು ಆಹ್ವಾನಿಸಿ ಈ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ನೆರವೇರಿಸಲು ಅಭಿಪ್ರಾಯ ವ್ಯಕ್ತವಾಯಿತು.
ಇದೇ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾಗಿ ಜವಾಬ್ದಾರಿಯನ್ನ ಸ್ವೀಕರಿಸಿರುವ ಡಾ. ಬಿ ಎ ಕುಮಾರ ಹೆಗ್ಡೆ ಅವರನ್ನು ಅಭಿನಂದಿಸಿ ಗೌರವಿಸಲಾಯಿತು.
ಹಿರಿಯ ವಿದ್ಯಾರ್ಥಿಗಳ ಉಜಿರೆ ಘಟಕದ ಅಧ್ಯಕ್ಷರಾಗಿರುವ ಪ್ರೀತಾಂಬರ ಹೆರಾಜೆ ಕಾರ್ಯದರ್ಶಿಗಳಾಗಿರುವ ಧನಂಜಯ ರಾವ್ ಹಾಗೂ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಡಾ. ಎಂ. ಪಿ ಶ್ರೀನಾಥ್ ಮತ್ತು ಶೈಲೇಶ್ ಕಾರ್ಯಕ್ರಮವನ್ನು ಸಂಯೋಜಿಸಿದರು.

LEAVE A REPLY

Please enter your comment!
Please enter your name here