Site icon Suddi Belthangady

ಮಾಜಿ ಸಚಿವ ಗಂಗಾಧರ ಗೌಡರ ಮನೆ ಮೇಲೆ ಐಟಿ ದಾಳಿ ಹಿನ್ನೆಲೆ: ಬಿಜೆಪಿ ವಿರುದ್ಧ ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಆಕ್ರೋಶ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿರುವ ಕಾಂಗ್ರೆಸ್ ನಾಯಕರ ಮೇಲೆ ಐಟಿ ದಾಳಿ ನಡೆಸಿರುವುದಕ್ಕೆ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೋಲಿನ ಹತಾಶೆಯಿಂದ ಬಿಜೆಪಿ ಪಕ್ಷದವರು ನಮ್ಮ‌ನಾಯಕರ ಮೇಲೆ ಐಟಿ ದಾಳಿ ನಡೆಸುತ್ತಿದೆ.ನಮ್ಮ ಕಾರ್ಯಕರ್ತರ ಉತ್ಸಾಹ ಕುಗ್ಗಿಸುವ ಕುತಂತ್ರವನ್ನು ಬಿಜೆಪಿ ಪಕ್ಷ ಮಾಡುತ್ತಿದೆ.ಕಾಂಗ್ರೆಸ್ ಕಾರ್ಯಕರ್ತರು ಇದಕ್ಕೆಲ್ಲ ಬಗ್ಗುವುದಿಲ್ಲ, ಕ್ಷೇತ್ರದಲ್ಲಿ ಅಭೂತಪೂರ್ವ ಬೆಂಬಲ ಕಾಂಗ್ರೆಸ್ ಪಕ್ಷಕ್ಕೆ ಸಿಗುತ್ತಿದೆ. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಮಾಜಿ ಸಚಿವರ ಪರವಾಗಿ ನಮ್ಮ ಪಕ್ಷ ಗಟ್ಟಿಯಾಗಿ ನಿಂತಿದೆ.ಐಟಿ ದಾಳಿಯ ಕುತಂತ್ರಕ್ಕೆ ಬೆಳ್ತಂಗಡಿ ಜನ ತಕ್ಕ ಉತ್ತರ ಕೊಡಲಿದ್ದಾರೆ.
ಮಾಜಿ ಸಚಿವ ಗಂಗಾಧರ ಗೌಡರ ಮೇಲಿನ ಬಿಜೆಪಿಯ ಸೇಡಿನ ರಾಜಕೀಯ ಬೆಳ್ತಂಗಡಿಯಲ್ಲಿ ನಡೆಯುವುದಿಲ್ಲ ಎಂದು ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಹೇಳಿಕೆ ನೀಡಿದ್ದಾರೆ.

Exit mobile version