Site icon Suddi Belthangady

ಎ.25ರಂದು ಮರೋಡಿ ಶ್ರೀ ಉಮಾಮಹೇಶ್ವರ ದೇವರ ಸನ್ನಿಧಾನದಲ್ಲಿ ಪ್ರತಿಷ್ಠಾ ಮಹೋತ್ಸವ

ಬೆಳ್ತಂಗಡಿ: ಆಲಡೆ ಕ್ಷೇತ್ರ ಮರೋಡಿ ಶ್ರೀ ಉಮಾಮಹೇಶ್ವರ ದೇವರ ಸನ್ನಿಧಾನದಲ್ಲಿ ಪ್ರತಿಷ್ಠಾ ಮಹೋತ್ಸವದ ಪ್ರಯುಕ್ತ ಏ.25ರಂದು ನಡೆಯಲಿದೆ.

ಪ್ರತಿಷ್ಠಾ ಮಹೋತ್ಸವದ ಪ್ರಯುಕ್ತ ಬೆಳಿಗ್ಗೆ 9ರಿಂದ ಚಂಡಿಕಾಯಾಗ, ಮೃತ್ಯುಂಜಯ ಹೋಮ, ಧನ್ವಂತರಿ ಹೋಮ, 108 ಸೀಯಾಳ ಅಭಿಷೇಕ ಹಮ್ಮಿಕೊಳ್ಳಲಾಗಿದೆ.

ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ 6 ಗಂಟೆಗೆ ಶ್ರೀಮತಿ ದೀಪಾ ಮತ್ತು ದೇವೇಂದ್ರ ಹೆಗ್ಡೆ ಕೊಕ್ರಾಡಿ ಕೊಡಂಗೆಗುತ್ತು ಅವರ ಸೇವಾರ್ಥ ಶ್ರೀ ಉಮಾಮಹೇಶ್ವರ ದೇವರಿಗೆ ರಂಗಪೂಜೆ ನಡೆಯಲಿದೆ.

ಈ ಪುಣ್ಯ ಕಾರ್ಯದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ದೇವರ ತೀರ್ಥ ಪ್ರಸಾದ ಸ್ವೀಕರಿಸುವಂತೆ ದೇವಸ್ಥಾನದ ಆಡಳಿತ ಮೊಕ್ತೇಸರ ದೇವೇಂದ್ರ ಹೆಗ್ಡೆ ಕೊಕ್ರಾಡಿ ತಿಳಿಸಿದ್ದಾರೆ.

Exit mobile version