ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ವಯಂ ರಕ್ಷಣಾ ತರಬೇತಿ ಕಾರ್ಯಕ್ರಮ

0

ಪುಂಜಾಲಕಟ್ಟೆ: ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ಇಲ್ಲಿ ಆಂತರಿಕ ಗುಣಮಟ್ಟ ಭರವಸಾ ಕೋಶ, ಭಾರತೀಯ ಯುವ ರೆಡ್ ಕ್ರಾಸ್, ಕಾಲೇಜು ಮಹಿಳಾ ಕೋಶ, ವಿದ್ಯಾರ್ಥಿ ಪ್ರತಿಭಾ ವೇದಿಕೆ ಇವುಗಳ ಸಂಯುಕ್ತ ಆಶ್ರಯದಲ್ಲಿ “ಸ್ವರಕ್ಷಾ ಫಾರ್ ವುಮನ್” ಟ್ರಸ್ಟ್ ನ ಸಹಭಾಗಿತ್ವದಲ್ಲಿ “ಸ್ವಯಂ ರಕ್ಷಣಾ ತರಬೇತಿ” ಕಾರ್ಯಕ್ರಮವನ್ನು ಎ.10ರಂದು ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ.ಟಿ.ಕೆ ಶರತ್ ಕುಮಾರ್ ವಹಿಸಿದ್ದರು.


ಈ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಶ್ರೀ ಕಾರ್ತಿಕ್ ಎಸ್ ಕಟೀಲ್ ಹಾಗೂ ಶ್ರೀಮತಿ ಶೋಭಲತಾ ಸುರೇಶ್ ಇವರು ಆಗಮಿಸಿದ್ದರು.ಕಾಲೇಜಿನ ಐಕ್ಯುಎಸಿ ಸಂಚಾಲಕರಾದ ಡಾ ಲೋಕೇಶ, ರೆಡ್ ಕ್ರಾಸ್ ನ ಸಂಚಾಲಕರಾದ ಪ್ರೊ.ಶೇಖರ್ ಹಾಗೂ ಕಾಲೇಜಿನ ಮಹಿಳಾ ಕೋಶದ ಸಂಚಾಲಕಿಯಾದ ಪ್ರೊ.ದೀಕ್ಷಿತಾ ವರ್ಕಾಡಿ ಇವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.ಸಂಪನ್ಮೂಲ ವ್ಯಕ್ತಿಯಾದ ಶ್ರೀ ಕಾರ್ತಿಕ್ ಎಸ್ ಕಟೀಲ್ ಅವರು ಸ್ವಯಂ ರಕ್ಷಣೆಯ ಅವಶ್ಯಕತೆ ಹಾಗೂ ಮಹತ್ವದ ಬಗ್ಗೆ ,”ಸ್ವರಕ್ಷಾ ಫಾರ್ ವುಮನ್” ತರಬೇತಿಯ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು.ಸ್ವಯಂ ರಕ್ಷಣೆಯ ತಂತ್ರಗಳನ್ನು ಪ್ರಾಯೋಗಿಕವಾಗಿ ಪರಿಚಯಿಸಲಾಯಿತು.

ಕಾರ್ಯಕ್ರಮದಲ್ಲಿ ಬೋಧಕ ಮತ್ತು ಬೋಧಕೇತರ ವರ್ಗದವರು ಹಾಗೂ  ಸುಮಾರು 300ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಭಾಗಿಯಾಗಿದ್ದರು.

LEAVE A REPLY

Please enter your comment!
Please enter your name here