ಚಾರ್ಮಾಡಿ: ಹೆಬ್ಬರಿಗೆ ಸಮೀಪ ಅನುಮಾನಾಸ್ಪದವಾಗಿ ವ್ಯಕ್ತಿ ಸಾವು, ಹೆಂಡತಿಯನ್ನು ಬಸ್ಸು ಹತ್ತಿಸಿ ಬೈಕ್‌ನಲ್ಲಿ ಬರುತ್ತೇನೆಂದ ಪತಿ ಶವವಾಗಿ ಪತ್ತೆ

0

ಕೊಟ್ಟಿಗೆಹಾರ: ಹೆಂಡತಿಯನ್ನು ಬಸ್ಸು ಹತ್ತಿಸಿ ಬೈಕಿನಲ್ಲಿ ಬರುತ್ತೇನೆಂದು ಹೇಳಿದ ಪತಿ ಹೆಬ್ಬರಿಗೆ ಸಮೀಪ ಅನುಮಾನಾಸ್ಪದವಾಗಿ ಶವವಾಗಿ ಪತ್ತೆಯಾದ ಘಟನೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಹೆಬ್ಬರಿಗೆಯಲ್ಲಿ ಬುಧವಾರ ನಡೆದಿದೆ.
ಚಿಕ್ಕಮಗಳೂರು ತಾಲ್ಲೂಕಿನ ತೇಗೂರಿನ ದಿಲೀಪ್ (೪೦) ಮೃತ ಪಟ್ಟ ವ್ಯಕ್ತಿ.ಧರ್ಮಸ್ಥಳದಲ್ಲಿ ಮುಡಿ ತೆಗೆಯುವ ಕಾರ್ಯ ಮಾಡುತ್ತಿದ್ದ ದಿಲೀಪ್ ಉಜಿರೆಯಲ್ಲಿ ವಾಸವಿದ್ದರು.ಪತ್ನಿಯೊಂದಿಗೆ ತೇಗೂರಿಗೆ ಬಂದಿದ್ದ ದಿಲೀಪ್ ಬುಧವಾರ ಬೈಕ್‌ನಲ್ಲಿ ಉಜಿರೆಗೆ ಹೊರಟ್ಟಿದ್ದು ಕೊಟ್ಟಿಗೆಹಾರ ಸಮೀಪ ಬರುತ್ತಿದ್ದಂತೆ ಮಳೆ ಪ್ರಾರಂಭವಾಗಿದ್ದರಿಂದ ಪತ್ನಿಯನ್ನು ಬಸ್ಸಿಗೆ ಹತ್ತಿಸಿ ಉಜಿರೆಗೆ ಹೋಗಿರಲು ಹೇಳಿ ತಾನು ಮಳೆ ನಿಂತ ಮೇಲೆ ಬೈಕ್‌ನಲ್ಲಿ ಬರುವುದಾಗಿ ತಿಳಿಸಿದ್ದಾರೆ.
ಬುಧವಾರ ಸಂಜೆ ಹೆಬ್ಬರಿಗೆ ಸಮೀಪ ರಸ್ತೆ ಬದಿಯಲ್ಲಿ ದಿಲೀಪ್ ಅವರ ಮೃತದೇಹ ಪತ್ತೆಯಾಗಿದೆ. ಮೃತದೇಹದ ಜೊತೆಗಿದ್ದ ಮೊಬೈಲ್‌ನಿಂದಾಗಿ ಮೃತದೇಹದ ಗುರುತು ಪತ್ತೆಯಾಗಿದ್ದು ಈ ಬಗ್ಗೆ ಸ್ಥಳಕ್ಕೆ ಬಣಕಲ್ ಪೊಲೀಸ್ ಠಾಣಾ ಪಿಎಸ್‌ಐ ಜಂಬೂರಾಜ್ ಮಹಾಜನ್, ಎಎಸ್‌ಐ ಶಶಿ, ಸಿಬ್ಬಂದಿಗಳಾದ ಜಗದೀಶ್ ಮುಂತಾದವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಕೈಗೊಂಡಿದ್ದಾರೆ.

ಚಾರ್ಮಾಡಿ ಘಾಟ್ ನಲ್ಲಿ ಸ್ಕೂಟಿ ಪತ್ತೆ:
ದಿಲೀಪ್ ಅವರ ಸ್ಕೂಟಿ ಚಾರ್ಮಾಡಿ ಘಾಟ್ ನ ಅಣ್ಣಪ್ಪಸ್ವಾಮಿ ದೇವಸ್ಥಾನದ ಸಮೀಪ ಅಪಘಾತವಾದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಕೊಟ್ಟಿಗೆಹಾರದಲ್ಲಿ ಹೆಂಡತಿ ಮತ್ತು ಮಗುವಿಗೆ ಬಸ್ ಹತ್ತಿಸಿ, ದಿಲೀಪ್ ಎಂಬುವನು ಸ್ಕೂಟರ್ ನಲ್ಲಿ ಹೋಗುವಾಗ ಚಾರ್ಮಾಡಿ ಘಾಟ್ ನಲ್ಲಿ ಸ್ಕೂಟರ್ ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಆ ವಾಹನದಲ್ಲಿ ಈ ವ್ಯಕ್ತಿ ಗೆ ಆಸ್ಪತ್ರೆಗೆ ಕರೆದುಕೊಂಡು ಬರುವಾಗ ದಾರಿ ಮಧ್ಯದಲ್ಲಿ ಪ್ರಾಣ ಹೋಗಿರುವ ಕಾರಣ ಆ ವ್ಯಕ್ತಿಯ ಹೆಣವನ್ನು ಬಿಸಾಕಿ ಹೋಗಿರುವ ಶಂಕೆನೂ ಇರಬಹುದು.

LEAVE A REPLY

Please enter your comment!
Please enter your name here