ಬೆಳಾಲು ಪ್ರೌಢಶಾಲೆಯ ಲೋಕೇಶ್ ರಾಷ್ಟ್ರೀಯ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

0

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆ ಬೆಳಾಲಿನಲ್ಲಿ ಎಂಟನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ ಲೋಕೇಶ್ ಪೂಜಾರಿಯವರು, ಕೇಂದ್ರ ಮಾನವ ಸಂಪನ್ಮೂಲ ಇಲಾಖೆಯವರಿಂದ, ರಾಜ್ಯದ ಸರಕಾರಿ ಮತ್ತು ಅನುದಾನಿತ ಶಾಲೆಗಳ ಎಂಟನೇ ತರಗತಿಯವರಿಗೆ ನಡೆಸಲ್ಪಡುವ, 2022-23ನೇ ಸಾಲಿನ ನ್ಯಾಶನಲ್ ಮೀನ್ಸ್ ಕಮ್ ಮೆರಿಟ್ ವಿದ್ಯಾರ್ಥಿ ವೇತನ(ಎನ್ಎಂಎಂಎಸ್) ಪರೀಕ್ಷೆಯಲ್ಲಿ ಎಂಬತ್ತೊಂದು ಅಂಕಗಳನ್ನು ಪಡೆದು ಆಯ್ಕೆ ಆಗಿರುತ್ತಾರೆ

ಈ ಪರೀಕ್ಷೆಯಲ್ಲಿ ಆಯ್ಕೆ ಆದ ವಿದ್ಯಾರ್ಥಿಗಳು ಮುಂದಿನ ನಾಲ್ಕು ವರ್ಷಗಳ ಕಾಲ ಅಂದರೆ ಪಿಯುಸಿ ಶಿಕ್ಷಣದವರೆಗೆ ಮಾಸಿಕ ರೂ.ಐದುನೂರರಂತೆ ವಿದ್ಯಾರ್ಥಿ ವೇತನವನ್ನು ಪಡೆಯಲಿದ್ದಾರೆ. ಈ ಅರ್ಹತಾ ಪರೀಕ್ಷೆಯಲ್ಲಿ ಬೆಳ್ತಂಗಡಿ ತಾಲೂಕಿನಿಂದ ಆಯ್ಕೆಯಾದ ಮೂವತ್ತು ವಿದ್ಯಾರ್ಥಿಗಳಲ್ಲಿ ಓರ್ವನಾದ ಇವರು ದೊಂಪದಫಲ್ಕೆಯ ವಸಂತ ಪುಜಾರಿಯವರ ಪುತ್ರ.ಬೆಳಾಲು ಪ್ರೌಢಶಾಲೆಯ ಗಣಿತ ಶಿಕ್ಷಕ ಗಣೇಶ್ವರ್ ಎಂ. ರವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಯು ಪರೀಕ್ಷೆಗೆ ತಯಾರಾಗಿದ್ದಾರೆ.

LEAVE A REPLY

Please enter your comment!
Please enter your name here