Site icon Suddi Belthangady

ಧರ್ಮಸ್ಥಳದಲ್ಲಿ ವಧು-ವರರಿಗೆ ಸೀರೆ, ಧೋತಿ ವಿತರಣೆ

ಧರ್ಮಸ್ಥಳ : ಧರ್ಮಸ್ಥಳದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ವಿ. ಹೆಗ್ಗಡೆಯವರು ನೂತನ ವಧು-ವರರಿಗೆ ಮೇ 2ರಂದು ಸೀರೆ, ಧೋತಿ ವಿತರಿಸಿದರು.

ನಾಳೆ ಬುಧವಾರ ಸಂಜೆ ಗಂಟೆ 6.40ಕ್ಕೆ ಗೋಧೂಳಿ ಲಗ್ನ ಸುಮೂಹೂರ್ತದಲ್ಲಿ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ 51ನೆ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಮದುವೆಯಾಗಲಿರುವ ವಧುವಿಗೆ ಸೀರೆ ಮತ್ತು ರವಿಕೆ ಕಣ ಹಾಗೂ ವರನಿಗೆ ಧೋತಿ ಮತ್ತು ಶಾಲನ್ನು ಬೀಡಿನಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ಹೆಗ್ಗಡೆಯವರು ವಿತರಿಸಿದರು.

Exit mobile version