ನೆರಿಯ, ಕೊಕ್ಕಡದಲ್ಲಿ ಬಿಜೆಪಿ ಚುನಾವಣಾ ಪ್ರಚಾರ ಸಭೆ: ಹಲವರ ಸೇರ್ಪಡೆ

0

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷವು ಬಹಿರಂಗ ಪ್ರಚಾರ ಸಭೆಯು ನೆರಿಯ ಹಾಗೂ ಕೊಕ್ಕಡದಲ್ಲಿ ನಡೆಯಿತು.ನೂರಾರು ಸಂಖ್ಯೆಯಲ್ಲಿ ಮತದಾರರು ಉಪಸ್ಥಿತರಿದ್ದರು.

ಈ ವೇಳೆ ನೆರಿಯದ ಕಾಂಗ್ರೆಸ್‌ ಮುಖಂಡರಾದ ಶಾಜನ್ ಟಿ.ಟಿ ಕಾಂಜಾಲ್ ಮತ್ತು ಲಕ್ಷ್ಮಣ್ ಜಿ.ಎಸ್ ಅವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.

ಹಾಗೂ ಕೊಕ್ಕಡದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್ ನಾಯಕರಾದ ಕಳೆಂಜ ಗ್ರಾಮದ ಕೃಷ್ಣಕುಮಾರ್ ಕಾರ್ಯತ್ತಡ್ಕ, ಗುರುನಾಥ್ ಕಾರ್ಯತಡ್ಕ, ಪಟ್ರಮೆ ಗ್ರಾಮದ ಲೀಯೋ ಪಟ್ಟೂರು ಅವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.

ಶಾಸಕ ಹರೀಶ್‌ ಪೂಂಜ ಹಾಗೂ ಬಿಜೆಪಿ ಮಂಡಲ ಅಧ್ಯಕ್ಷರಾದ ಜಯಂತ್‌ ಕೋಟ್ಯಾನ್‌ ಅವರು ಪಕ್ಷದ ಧ್ವಜ ನೀಡುವ ಮೂಲಕ ಕಾಂಗ್ರೆಸ್‌ ಮುಖಂಡರನ್ನು ಬಿಜೆಪಿ ಪಕ್ಷಕ್ಕೆ ಬರಮಾಡಿಕೊಂಡರು.

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಪ್ರಭಾರಿ ಯತೀಶ್‌ ಆರ್ವಾರ್‌, ಮಂಡಲ ಬಿಜೆಪಿ ಅಧ್ಯಕ್ಷರಾದ ಜಯಂತ್ ಕೋಟ್ಯಾನ್, ಹಿರಿಯರಾದ ಸುಬ್ರಮಣ್ಯ ಅಗರ್ತ, ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಪೂಜಾರಿ ಕಾಪಿನಡ್ಕ ಹಾಗೂ ಅನೀಶ್ ಪೂಜಾರಿ ವೇಣೂರು, ಅಭ್ಯರ್ಥಿ ಪ್ರಮುಖ್‌ ಜಯಾನಂದ್‌ ಗೌಡ, ಮಾಜಿ ಮಂಡಲ ಅಧ್ಯಕ್ಷರಾದ ಕುಶಾಲಪ್ಪ ಗೌಡ, ಮಂಡಲ ಪದಾಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here