Site icon Suddi Belthangady

ಬೆಳ್ತಂಗಡಿ: ಸರ್ವೋದಯ ಕರ್ನಾಟಕ ಪಕ್ಷದ ಪ್ರಣಾಳಿಕೆ ಬಿಡುಗಡೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ರೈತ ಸಂಘದ ಬೆಂಬಲದಿಂದ ಕರ್ನಾಟಕ ವಿಧಾನ ಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಸರ್ವೋದಯ ಕರ್ನಾಟಕ ಪಕ್ಷದ ಪ್ರಣಾಳಿಕೆಯನ್ನು ಮೇ.3 ರಂದು ಬೆಳ್ತಂಗಡಿ ಸುವರ್ಣ ಆರ್ಕೆಡ್ ನಲ್ಲಿ ಸರ್ವೋದಯ ಕರ್ನಾಟಕ ಪಕ್ಷದ ಅಧ್ಯಕ್ಷ ಚಾಮರಸ ಪಾಟೀಲ್ ಬಿಡುಗಡೆ ಗೊಳಿಸಿದರು.ಬಳಿಕ ಮಾತನಾಡಿ ರೈತರ ಪರ ಹೋರಾಟಕ್ಕೆ ಗುಣತ್ಮಕ, ಭ್ರಷ್ಟಾಚಾರ ರಹಿತ, ಜನಪರ ಆಡಳಿತಕ್ಕಾಗಿ ಪಕ್ಷ ಬೆಳ್ತಂಗಡಿ ಸೇರಿ ರಾಜ್ಯದ 8 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿದೆ ಎಂದರು.ಬೆಳ್ತಂಗಡಿ ಅಭ್ಯರ್ಥಿ ಆದಿತ್ಯ ನಾರಾಯಣ ಕೊಲ್ಲಾಜೆ ಮಾತನಾಡಿ ಪ್ರಣಾಳಿಕೆಗಳಾದ ಗ್ರಾಮಾಭಿವೃದ್ಧಿ, ಶಿಕ್ಷಣ, ಉದ್ಯೋಗ, ಆರೋಗ್ಯ, ಮಹಿಳಾ ಸಬಲೀಕರಣ, ಕೃಷಿ, ಪಿಂಚಣಿ, ವೃದ್ಧಾಶ್ರರಮ, ಅನಾಥಶ್ರಮ, ವಿಕಲ ಚೇತನರ ಆರೈಕೆ ಕೇಂದ್ರಗಳ ಸ್ಥಾಪನೆ, ಪ್ರವಾಸೋದ್ಯಮಕ್ಕೆ ಒತ್ತು, ಪರಿಸರ ಸಂರಕ್ಷಣೆ ಸೇರಿದಂತೆ ಈ ಯೋಜನೆಗಳನ್ನು ಸೇರಿಸಲಾಗಿದೆ ಎಂದರು.

ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕಿರಣ ಪುಣಚ, ಜಿಲ್ಲಾ ಅಧ್ಯಕ್ಷ ಒಸ್ವಾಲ್ಡ್ ಪ್ರಕಾಶ್ ಫೆರ್ನಾಂಡಿಸ್,ಜಿಲ್ಲಾ ಕಾರ್ಯದರ್ಶಿ ಪ್ರೇಮನಾಥ ಶೆಟ್ಟಿ ಬಾಳ್ತಿಲ, ಕಾರ್ಮಿಕ ಮುಖಂಡ ರಾಮಣ್ಣ ವಿಟ್ಲ,ಸರ್ವೋದಯ ಕರ್ನಾಟಕ ಪಕ್ಷದ ತಾಲೂಕು ಅಧ್ಯಕ್ಷ ಅವಿನಾಶ್, ಕಾರ್ಯದರ್ಶಿ ದೇವಪ್ಪ ನಾಯ್ಕ, ಕೊಪ್ಪಲ ಬೀಮ್ ಸಮ್ ಕರ್ಕೇರಿ ಉಪಸ್ಥಿತರಿದ್ದರು

Exit mobile version