ಸ.ಪ್ರ.ದ ಕಾಲೇಜು ಬೆಳ್ತಂಗಡಿಯಲ್ಲಿ ಜೀವನ ಕೌಶಲ್ಯದ ಕುರಿತು ಕಾರ್ಯಗಾರ

0

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿಯಲ್ಲಿ ಐಕ್ಯೂಎಸಿ, ಯೂತ್ ರೆಡ್ ಕ್ರಾಸ್, ರೋವರ್ಸ್ ರೇಂಜರ್ಸ್ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಇದರ ಅಡಿಯಲ್ಲಿ ಜೀವನ ಕೌಶಲ ವಿಷಯದ ಮೇಲೆ ಕಾರ್ಯಾಗಾರವನ್ನು ಮೇ.3ರಂದು ಹಮ್ಮಿಕೊಳ್ಳಲಾಗಿತ್ತು.

ಜೀವನ ಕೌಶಲಕ್ಕೆ ಸಂಬಂಧಪಟ್ಟಂತೆ ವಿವಿಧ ಚಟುವಟಿಕೆಗಳನ್ನು ನಡೆಸಿ ವಿದ್ಯಾರ್ಥಿಗಳಿಗೆ, ಸ್ವ ಅರಿವು, ಸಹಾನುಭೂತಿ ಸೃಜನಾತ್ಮಕ ಆಲೋಚನೆ, ಸಂವಹನ ಕೌಶಲಗಳ ಅರಿವು ಮೂಡಿಸಲಾಯಿತು. ಸುಮಾರು 150 ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಡಾ. ಸುಬ್ರಹ್ಮಣ್ಯ ಭಟ್ ಕೆ ಇವರು ವಹಿಸಿದ್ದರು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಪ್ರೊ. ಸಂತೋಷ್ ಪ್ರಭು ಎಂ, ಸಹಾಯಕ ಪ್ರಾಧ್ಯಾಪಕರು ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ಕಾರ್ಯಗಾರವನ್ನು ಉದ್ಘಾಟಿಸಿ ನಡೆಸಿಕೊಟ್ಟರು. ಪ್ರೊಫೆಸರ್ ಸುರೇಶ್ ವಿ, ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರು ಸರ್ವರನ್ನು ಕಾರ್ಯಕ್ರಮಕ್ಕೆ ಸ್ವಾಗತಿಸಿದರು. ಡಾ. ರವಿ ಎಂ. ಎನ್, ರೋವರ್ಸ್ ರೆಂಜರ್ಸ್ ಸಂಯೋಜನಾಧಿಕಾರಿಗಳು ಕಾರ್ಯಕ್ರಮದ ಉಸ್ತುವಾರಿ ಹೊತ್ತಿದ್ದರು. ಪ್ರೊ. ರಾಜೇಶ್ವರಿ ಎಚ್ಎಸ್ ಸಹಾಯಕ ಪ್ರಾಧ್ಯಾಪಕರು ವಾಣಿಜ್ಯಶಾಸ್ತ್ರ ವಿಭಾಗ ಇವರು ಸರ್ವರನ್ನು ವಂದಿಸಿದರು. ರೋವರ್ಸ್ ರೆಂಜರ್ಸ್ ವಿದ್ಯಾರ್ಥಿಗಳು ಕಾರ್ಯಕ್ರಮವನ್ನು ಆಯೋಜನೆಯ ಜವಾಬ್ದಾರಿಯನ್ನು ವಹಿಸಿಕೊಂಡಿದ್ದರು.

LEAVE A REPLY

Please enter your comment!
Please enter your name here