ಧರ್ಮಸ್ಥಳದಲ್ಲಿ 51ನೇ‌ ವರ್ಷದ ಉಚಿತ ಸಾಮೂಹಿಕ ವಿವಾಹ: 201 ಜೋಡಿ ವಧು-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

0

ಉಜಿರೆ: ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ಬುಧವಾರ ಸಂಜೆ ಗಂಟೆ 6.40ರ ಗೋಧೊಳಿ ಲಗ್ನ ಸುಮೂರ್ಹತದಲ್ಲಿ ನಡೆದ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ 201 ಜೋಡಿ ವಧು-ವರರು ದೇವಸ್ಥಾನಕ್ಕೆ ಪ್ರದಕ್ಷಿಣೆ ಬಂದು ಅಮೃತವರ್ಷಿಣಿ ಸಭಾಭವನಕ್ಕೆ ತೆರಳಿದರು.

ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ಹೆಗ್ಗಡೆಯವರು, ಚಲನಚಿತ್ರ ನಟ ದರ್ಶನ್ ತೂಗುದೀಪ, ಡಿ. ಸುರೇಂದ್ರ ಕುಮಾರ್ ಮತ್ತು ಗಣ್ಯ ಅತಿಥಿಗಳು ಮಂಗಳಸೂತ್ರವನ್ನು ವಿತರಿಸಿದರು. 6.40ರ ಗೋಧೊಳಿ ಲಗ್ನ ಸುಮೂರ್ಹತದರಲ್ಲಿ ವೇದ, ಮಂತ್ರ ಘೋಷ ಪಠಣದೊಂದಿಗೆ ವರನು ವಧುವಿಗೆ ಮಂಗಳಸೂತ್ರಧಾರಣೆ ಮಾಡಿ ಆಯಾ ಜಾತಿ ಸಾಂಪ್ರದಾಯದಂತೆ ಮದುವೆಯ ಧಾರ್ಮಿಕ ವಿಧಿ -ವಿಧಾನಗಳನ್ನು ನಡೆಸಲಾಯಿತು.

ನೂತನ ದಂಪತಿಗಳು ಪರಸ್ಪರ ಹೊಂದಾಣಿಕೆಯೊಂದಿಗೆ ಸಹನೆ, ತಾಳ್ಮೆಯಿಂದ ಸಾರ್ಥಕ ಜೀವನ ನಡೆಸಿ : ಡಿ. ವೀರೇಂದ್ರ ಹೆಗ್ಗಡೆ

ಮದುವೆಯಾಗಿ ಬಂದ ಗೃಹಿಣಿ ಭಾಗ್ಯಲಕ್ಷ್ಮಿಯಾಗಿ ಮನೆಯನ್ನೇ ಬೆಳಗಿ ಸ್ವರ್ಗವನ್ನಾಗಿ ಮಾಡುತ್ತಾಳೆ. ಪತಿ-ಪತ್ನಿ ಪರಸ್ಪರ ಹೊಂದಾಣಿಕೆ, ತಾಳ್ಮೆ ಮತ್ತು ಸಹನೆಯಿಂದ ಸುಖ- ಕಷ್ಟವನ್ನು ಸಮಾನವಾಗಿ ಸ್ವೀಕರಿಸಿ ಅನುಭವಿಸಿ, ಸಾರ್ಥಕ ದಾಂಪತ್ಯ ಜೀವನ ನಡೆಸಬೇಕು ಎಂದು ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರು ನೂತನ ದಂಪತಿಗಳಿಗೆ ಶುಭ ಹಾರೈಸಿದರು.

ಹೇಮಾವತಿ ವಿ. ಹೆಗ್ಗಡೆ, ಶ್ರದ್ಧಾ ಅಮಿತ್, ಡಿ. ಸುರೇಂದ್ರ ಕುಮಾರ್, ಅನಿತಾ ಸುರೇಂದ್ರ ಕುಮಾರ್, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ಶ್ರುತಾಜಿತೇಶ್ ಮತ್ತು ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಉಪಸ್ಥಿತರಿದ್ದರು.

ಡಿ. ಹರ್ಷೇಂದ್ರ ಕುಮಾರ್ ಸ್ವಾಗತಿಸಿದರು. ಶ್ರೀನಿವಾಸ ರಾವ್ ಧಾರ್ಮಸ್ಥಳ ಧನ್ಯವಾದವಿತ್ತರು. ದಿವ್ಯ ಕುಮಾರಿ ಕಾರ್ಯಕ್ರಮ ನಿರ್ವಹಿಸಿದರು.

ವಧು-ವರರ ಪ್ರಮಾಣ ವಚನ:

ಧರ್ಮಸ್ಥಳದಲ್ಲಿ ಮಂಗಳ ಮುಹೂರ್ತದಲ್ಲಿ ವಧು-ವರರಾಗಿ ಪವಿತ್ರ ಬಾಂಧವ್ಯ ಹೊಂದಿರುವ ನಾವು ಮುಂದೆ ಜೀವನದಲ್ಲಿ ಧರ್ಮ, ಅರ್ಥ ಮತ್ತು ಕಾಮದಲ್ಲಿ ಸಹಚರವಾಗಿ, ಪರಸ್ಪರ ಪ್ರೀತಿ – ವಿಶ್ವಾಸದಿಂದ ಒಬ್ಬರಿಗೊಬ್ಬರು ವಂಚನೆ ಮಾಡದೆ, ಯಾವುದೇ ದುರಭ್ಯಾಸಕ್ಕೂ ತುತ್ತಾಗದೆ ಬದುಕುತ್ತೇವೆ ಎಂಬುದಾಗಿ ಮಂಜುನಾಥ ಸ್ವಾಮಿಯ ದಿವ್ಯ ಸನ್ನಿಧಿಯಲ್ಲಿ ಮತ್ತು ಪೂಜ್ಯ ಹೆಗ್ಗಡೆಯವರ ಸಮಕ್ಷಮದಲ್ಲಿ ಪ್ರಮಾಣವಚನ ಬದ್ಧರಾಗುತ್ತೇವೆ.

ಮದುವೆಯ ವಿವರ:

ಅಂತರ್ಜಾತಿ ವಿವಾಹ: 52, ಪರಿಶಿಷ್ಟ ಜಾತಿ:52, ಕುರುಬ: ವೀರಶೈವ:9, ಪರಿಶಿಷ್ಟ ವರ್ಗ:11 ಉಳಿದ 68 ಜೊತೆ ಇತರ ಸೇರಿದವರು.

ಕೇರಳದಿಂದ ಮೂರು ಜೊತೆ ಹಾಗೂ ಆಂಧ್ರಪ್ರದೇಶದ ಒಂದು ಜೊತೆ ಸಾಮೂಹಿಕ ವಿವಾಹದಲ್ಲಿ ಮದುವೆಯಾದರು.

12,7777 ವಿಶೇಷ ಜೋಡಿ: ಸಾಮೂಹಿಕ ವಿವಾಹದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಿಬ್ಬಂದಿಗಳಾದ ಪ್ರಸಾದ್ ಮತ್ತು ಅಶ್ವಿನಿ ಈ ವರ್ಷ ಮದುವೆಯಾದ 12,777ನೇ ಜೋಡಿಯಾಗಿ ಗಮನಸೆಳೆದರು. ಈ ವಧು- ವರರಿಗೆ ವಿಶೇಷ ವೇದಿಕೆಯನ್ನು ಕಲ್ಪಿಸಲಾಗಿತ್ತು.

p>

LEAVE A REPLY

Please enter your comment!
Please enter your name here