ಅರಸಿನಮಕ್ಕಿ: ಹತ್ಯಡ್ಕ ಗ್ರಾಮದ ಅರಸಿನಮಕ್ಕಿ ಸಮೀಪದ ಪಾಲೆಂಜ ನಿವಾಸಿ ಕೃಷಿಕ ಮುರಳೀಧರ ಗೌಡ ಪಾಲೆಂಜ ಇವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ.4ರಂದು ನಡೆದಿದೆ.
ಕಂಟ್ರಾಕ್ಟ್ ದಾರರಾಗಿದ್ದ ಇವರು ಜನಾನುರಾಗಿಯಾಗಿದ್ದರು.
ಹಲವಾರು ಸಂಘ -ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಯೋಜನಾಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದರು.ಅರಿಕೆಗುಡ್ಡೆ ಶ್ರೀ ವನದುರ್ಗ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಕೋಶಾಧಿಕಾರಿಯಾಗಿ ದೇವಳದ ಅಭಿವೃದ್ಧಿಗೆ ವಿಶೇಷವಾಗಿ ಶ್ರಮಿಸಿದ್ದರು.
ಆರೋಗ್ಯದ ಸಮಸ್ಯೆ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್ ನೋಟ್ ಬರೆದಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.