Site icon Suddi Belthangady

ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯಿಂದ ಶ್ರೀಮತಿ ಹೇಮಾವತಿ ವಿ.ಹೆಗ್ಗಡೆ ಮತ್ತು ಡಿ.ಹರ್ಷೇಂದ್ರ ಕುಮಾರ್ ರವರಿಗೆ ಸನ್ಮಾನ

ಉಜಿರೆ: ಶ್ರೀ ಧ.ಮಂ. ಎಜ್ಯುಕೇಶನಲ್ ಸೊಸೈಟಿ (ರಿ.)ಉಜಿರೆ ಇದರ ವತಿಯಿಂದ ಧರ್ಮಸ್ಥಳದ ಡಿ. ಹರ್ಷೇಂದ್ರಕುಮಾರ್ ಮತ್ತು ಮಾತೃಶ್ರೀ ಹೇಮಾವತಿ ವೀ. ಹೆಗ್ಗಡೆಯವರಿಗೆ ಇತ್ತೀಚೆಗೆ ಉಜಿರೆ ಶ್ರೀ ಸಿದ್ಧವನ ಗುರುಕುಲದಲ್ಲಿ ಸನ್ಮಾನ ಕಾರ್ಯಕ್ರಮ ಜರಗಿತು. ಮಾತೃ ಶ್ರೀ ಹೇಮಾವತಿ ವೀ. ಹೆಗ್ಗಡೆಯವರು, ಸಾಧನ ರಾಷ್ಟ್ರೀಯ ಸಾಂಸ್ಕೃತಿಕ ಪ್ರತಿಷ್ಠಾನ ಮಂಗಳೂರು ಇವರು 2022 – 23ನೇ ಸಾಲಿನಲ್ಲಿ ಕೊಡಮಾಡುವ ಸಾಧನ ರಾಜ್ಯ ಪುರಸ್ಕಾರಕ್ಕೆ ಭಾಜನರಾಗಿರುತ್ತಾರೆ. ಮಾತೃಶ್ರೀಯವರಿಗೆ, ಧಾರ್ಮಿಕ ಮತ್ತು ಮಹಿಳಾ ಸಬಲೀಕರಣ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆ ಮತ್ತು ಕೊಡುಗೆಯನ್ನು ಗುರುತಿಸಿ “ರಾಜ್ಯ ಸಾಧನ ಪುರಸ್ಕಾರ”ವನ್ನು ಪ್ರದಾನ ಮಾಡಲಾಗಿದೆ. ಡಿ. ಹರ್ಷೇಂದ್ರ ಕುಮಾರ್ ರವರು ಸುರತ್ಕಲ್ ಅಗರಿ ಶ್ರೀನಿವಾಸ ಭಾಗವತರ ಸಂಸ್ಕರಣಾ ವೇದಿಕೆ ನೀಡುವ 2022-23ನೇ ಸಾಲಿನ “ಅಗರಿ” ಪುರಸ್ಕಾರವನ್ನು ಪಡೆದಿರುತ್ತಾರೆ. ಕಳೆದ ನಾಲ್ಕು ದಶಕಗಳಿಂದ ಯಕ್ಷಗಾನ ಕ್ಷೇತ್ರಕ್ಕೆ ಸಲ್ಲಿಸಿದ ಸೇವೆ ಮತ್ತು ಕೊಡುಗೆಗಾಗಿ ಅಗರಿ ಪುರಸ್ಕಾರ ನೀಡಲ್ಪಟ್ಟಿದೆ.

ಶ್ರೀಧ ಮಂ ಶಿಕ್ಷಣ ಸಂಸ್ಥೆಗಳ ವತಿಯಿಂದ ನಡೆದ ಈ ಗೌರವಾರ್ಪಣೆಯು ಡಾ. ಡಿ ವೀರೇಂದ್ರ ಹೆಗ್ಗಡೆ, ಶ್ರೀಮತಿ ಸುಪ್ರಿಯ ಹರ್ಷೇಂದ್ರ ಕುಮಾರ್ ಮತ್ತು ಪೂರಣ್ ವರ್ಮರವರ ಸಮ್ಮುಖದಲ್ಲಿ ಜರಗಿತು.

ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಾ. ಸತೀಶ್ಚಂದ್ರರವರು ಗೌರವಾರ್ಪಣೆಯ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ಬಿ. ಸೋಮಶೇಖರ ಶೆಟ್ಟಿಯವರು ಮತ್ತು ಶ್ರೀ ಧ ಮ ಶಿಕ್ಷಣ ಸಂಸ್ಥೆಗಳ ಮುಖ್ಯೋಪಾಧ್ಯಾಯರುಗಳು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಬೆಳಾಲು ಶ್ರೀ ಧ ಮ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ರಾಮಕೃಷ್ಣ ಭಟ್ ರವರು ಸ್ವಾಗತಿಸಿ ನಿರೂಪಿಸಿದರು. ಶ್ರೀ ಧ. ಮ. ಸಿ ಬಿ ಎಸ್ ಇ ಶಾಲೆಯ ಪ್ರಾಂಶುಪಾಲರಾದ ಮನಮೋಹನ್ ನಾಯಕ್ ರವರು ವಂದಿಸಿದರು.

Exit mobile version