ನಾಳೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಎಸ್‌ಡಿಪಿಐ ಪಕ್ಷದ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಅವರಿಂದ ನಗರದಲ್ಲಿ ರೋಡ್ ಶೋ ಮೂಲಕ ಮತಯಾಚನೆ

0

ಬೆಳ್ತಂಗಡಿ (ಮೇ-7): ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ SDPI ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಅವರಿಂದ ಮೇ 8 2023, ಸೋಮವಾರ ಬೆಳಿಗ್ಗೆ 8.30 ಗಂಟೆಗೆ ಸರಿಯಾಗಿ ಬೆಳ್ತಂಗಡಿ ಸಂತೆಕಟ್ಟೆಯಿಂದ ಬೆಳ್ತಂಗಡಿ ಬಸ್ ನಿಲ್ದಾಣ ವರೆಗೆ ಬೃಹತ್ ರೋಡ್ ಶೋ ಮತ್ತು ಮತ ಯಾಚನೆ ಕಾರ್ಯಕ್ರಮ ನಡೆಯಲಿದೆ.

ಈ ಕಾರ್ಯಕ್ರಮಕ್ಕೆ ಪಕ್ಷದ ರಾಜ್ಯ ನಾಯಕರು ಮತ್ತು ಜಿಲ್ಲಾ ನಾಯಕರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಕಾರ್ಯದರ್ಶಿ ಅಶ್ರಫ್ ಕಟ್ಟೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here