ಧರ್ಮಸ್ಥಳಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ದೇವರ ದರ್ಶನ ಮತ್ತು ವೀರೇಂದ್ರ ಹೆಗ್ಗಡೆ ಭೇಟಿ

0

ಧರ್ಮಸ್ಥಳ: ಕರ್ನಾಟಕ ವಿಧಾನಸಭಾ ಚುನಾವಣೆಯ ಹಿನ್ನಲೆ ಕಾಪುವಿನಲ್ಲಿ ಪ್ರಚಾರ ಕಾರ್ಯಕ್ಕೆಂದು ರಾಜ್ಯಕ್ಕೆ ಆಗಮಿಸಿರುವ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಇಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದರು.
ಹೆಲಿಕಾಪ್ಟರ್ ನಲ್ಲಿ ಆಗಮಿಸಿದ ಶಿಂಧೆಗೆ ಬೆಳ್ತಂಗಡಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮತ್ತು ಕಾರ್ಯಕರ್ತರು ಸ್ವಾಗತ ಕೋರಿದರು.

ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಭೇಟಿ:
ಏಕನಾಥ್ ಶಿಂದೆ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಇದೇ ವೇಳೆ ಸಿಎಂಗೆ ವೀರೇಂದ್ರ ಹೆಗ್ಗಡೆಯವರು ಗೌರವಪೂರ್ವಕವಾಗಿ ಸನ್ಮಾನಿಸಿದರು. ಏಕನಾಥ್ ಶಿಂಧೆಯವರು ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಅಭಿನಂದಿಸಿ ಆಶೀರ್ವಾದ ಪಡೆದರು.‌ಇದೇ ವೇಳೆ ಶಿಂಧೆ ಹರ್ಷೇಂದ್ರ ಕುಮಾರ್ ರವರನ್ನು ಅಭಿನಂದಿಸಿದರು.

ದೇವರ ದರ್ಶನ ಪಡೆದ ಏಕನಾಥ್ ಶಿಂಧೆ:
ತಮ್ಮ ಬೆಂಬಲಿಗರೊಂದಿಗೆ ತೆರಳಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಾಪಾಸಾದರು.

LEAVE A REPLY

Please enter your comment!
Please enter your name here