ಲಾಯಿಲ: ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

0

ಲಾಯಿಲ: ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆ ಲಾಯಿಲ, ಇಲ್ಲಿಯ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು ಒಟ್ಟು 73 ವಿದ್ಯಾರ್ಥಿಗಳು ಪರೀಕ್ಷೆ ಬರೆದು 73 ವಿದ್ಯಾರ್ಥಿಗಳು ತೇರ್ಗಡೆಯಾಗಿ ಶೇಕಡ 100 ಫಲಿತಾಂಶ ದಾಖಲಿಸಿದೆ. 34 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 38 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, ಹಾಗೂ ಒಬ್ಬ ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ.ಶಾಲೆಯ ಕೀರ್ತನ.ಕೆ. ರಾವ್ ಹಾಗೂ ಯಶ್ವಿತಾ 625ರಲ್ಲಿ 614 ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನವನ್ನು ಗಳಿಸಿರುತ್ತಾರೆ. 611 ಅಂಕಗಳನ್ನು ಪಡೆದು ನಿಖಿಲ್ ಕುಮಾರ್ ದ್ವಿತೀಯ ಸ್ಥಾನವನ್ನು, 609 ಅಂಕಗಳನ್ನು ಪಡೆದು ಮಧುವರ್ಷಿಣಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.

LEAVE A REPLY

Please enter your comment!
Please enter your name here