ವಿಧಾನಸಭಾ ಚುನಾವಣೆ ಹಿನ್ನೆಲೆ ನಾಳೆ ಸಾರ್ವತ್ರಿಕ ರಜೆ

0

ಬೆಳ್ತಂಗಡಿ: ಮೇ.10 ಬುಧವಾರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಮತದಾನ ನಡೆಯಲಿರುವ ಹಿನ್ನೆಲೆ ಎಲ್ಲಾ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಕಚೇರಿಗಳಿಗೆ, ಶಾಲಾ- ಕಾಲೇಜುಗಳಿಗೆ ಸಂಘ-ಸಂಸ್ಥೆಗಳಿಗೆ ಹಾಗೂ ಖಾಸಗಿ ಸಂಸ್ಥೆಗಳಿಗೆ ಸಾರ್ವತ್ರಿಕ ರಜೆಯನ್ನು ಘೋಷಣೆ ಮಾಡಲಾಗಿದೆ.

ಈ ಸಂಬಂಧ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ಕರ್ನಾಟಕ ವಿಧಾನಸಭಾ ಚುನಾವಣೆಗೆ ಮೇ.10ರಂದು ಮತದಾನ ನಡೆಯಲಿದೆ. ಮತ ಚಲಾಯಿಸಲು ಅನುಕೂಲವಾಗುವಂತೆ ಆಯಾ ಮತ ಕ್ಷೇತ್ರಗಳ ಎಲ್ಲಾ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಕಚೇರಿಗಳಿಗೆ, ಶಾಲಾ ಕಾಲೇಜುಗಳಿಗೆ, ವಿವಿಧ ಸಂಘ ಸಂಸ್ಥೆಗಳಿಗೆ ಮತ್ತು ಖಾಸಗಿ ಸಂಸ್ಥೆಗಳಿಗೆ ಅಂದರೆ ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ ಸರ್ಕಾರವು ಆಯಾ ಚುನಾವಮಾ ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲು ದಿನಾಂಕದಂದು ಸಾರ್ವತ್ರಿಕ ರಜೆಯನ್ನು ಘೋಷಿಸಿದೆ. ಈ ರಜೆಯು ತುರ್ತು ಸೇವೆಗಳಿಗೆ ಅನ್ವಯಿಸುವುದಿಲ್ಲ ಎಂದಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಚುನಾವಣಾ ಕಾರ್ಯಗಳಿಗೆ ನಿಯೋಜಿಸಲ್ಪಟ್ಟ ಎಲ್ಲಾ ಸರ್ಕಾರಿ ನೌಕರರುಗಳು ಚುನಾವಣಾ ಕರ್ತವ್ಯಕ್ಕೆ ಹಾಜರಾಗತಕ್ಕದ್ದು.

LEAVE A REPLY

Please enter your comment!
Please enter your name here