ಉಜಿರೆ ಎಸ್.ಡಿ.ಎಂ ಕಾಲೇಜಿನ ವಿಜ್ಞಾನ ವಿಭಾಗಕ್ಕೆ ಪ್ರಶಸ್ತಿಗಳ ಸರಮಾಲೆ

0

ಉಜಿರೆ: ಆಳ್ವಾಸ್ ಕಾಲೇಜು ಮೂಡಬಿದ್ರೆ ಇಲ್ಲಿ ಜರಗಿದ ಉದ್ಭವ್- 2023, ಸೈನ್ಸ್ ಫೆಸ್ಟ್, ವಿಜ್ಞಾನ ಮೇಳದಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಪ್ರಶಸ್ತಿಗಳ ಸಿಂಹ ಪಾಲನ್ನು ತಮ್ಮದಾಗಿಸಿಕೊಂಡಿದ್ದಾರೆ.

ವೈಯಕ್ತಿಕ ವಿಭಾಗದಲ್ಲಿ ಆರು ಹಾಗೂ ಸಮಗ್ರ ರನ್ನರ್ ಅಪ್ ಚಾಂಪಿಯನ್ಶಿಪ್ ನ್ನು ಈ ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ಪಡೆದಿದ್ದಾರೆ.
ಸಸ್ಯಶಾಸ್ತ್ರ ಪ್ರಾಧ್ಯಾಪಕ ಅಭಿಲಾಶ್ ಕೆಎಸ್ ಇವರ ಮಾರ್ಗದರ್ಶನದಲ್ಲಿ ಪ್ರಶಸ್ತಿಗಳನ್ನು ಪಡೆದ ವಿದ್ಯಾರ್ಥಿಗಳ ತಂಡದ ಸಾಧನೆಗೆ ಕಾಲೇಜಿನ ಪ್ರಿನ್ಸಿಪಾಲ್ ಡಾ. ಕುಮಾರ ಹೆಗ್ಡೆ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here