Site icon Suddi Belthangady

ಮೇ.13 ವಿಧಾನಸಭಾ ಚುನಾವಣಾ ಮತ ಎಣಿಕೆ: ದ.ಕ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಳ್ತಂಗಡಿ: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ವೇಳಾಪಟ್ಟಿಯನ್ನು ಮಾ.29 ರಂದು ಪ್ರಕಟಿಸಿದ್ದು, ಮೇ.10 ರಂದು ಮತದಾನವು ನಡೆದು ಮತ ಎಣಿಕೆ ಕಾರ್ಯವು ಮೇ.13 ರಂದು ಶನಿವಾರ ಎನ್ ಐ ಟಿ ಕ, ಸುರತ್ಕಲ್, ಮಂಗಳೂರು ಇಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ ಅಂದು ಬೆಳಗ್ಗೆ 5 ರಿಂದ ರಾತ್ರಿ 12 ಗಂಟೆ ತನಕ ನಿಷೇಧಾಜ್ಞೆ ಜಾರಿಗೊಳಿಸಿ ದ.ಕ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಆದೇಶ ಹೊರಡಿಸಿದ್ದಾರೆ.

ಮತ ಎಣಿಕೆ ಕಾರ್ಯದ ನಂತರ ವಿಜಯಿಯಾದ ಅಭ್ಯರ್ಥಿಗಳು ತಮ್ಮ ಬೆಂಬಲಿಗರೊಂದಿಗೆ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸುತ್ತಾ ಮೆರವಣಿಗೆಯಲ್ಲಿ ಸಾಗುವ ಸಾಧ್ಯತೆ ಇರುತ್ತದೆ.ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಭಾಗಗಳು ಕೋಮು ಸೂಕ್ಷ್ಮ ಪ್ರದೇಶಗಳಾಗಿರುವುದರಿಂದ ಸಮಾಜ ಘಾತುಕ ಶಕ್ತಿಗಳು ಶಾಂತಿ ಭಂಗವನ್ನು ಉಂಟುಮಾಡುವ ಸಾಧ್ಯತೆಗಳಿದ್ದು, ವಿಜೇತ ಅಭ್ಯರ್ಥಿಗಳು ಹಾಗೂ ಪರಾಜಿತ ಅಭ್ಯರ್ಥಿಗಳ ಬೆಂಬಲಿಗರ ನಡುವೆ ವೈಷಮ್ಯದ ಹಿನ್ನೆಲೆಯಲ್ಲಿ ಅಹಿತಕರ ಘಟನೆಗಳು ನಡೆದು ಕೋಮು ಘರ್ಷಣೆಗಳಾಗಿ ಪರಿವರ್ತಿತಗೊಳ್ಳುವ ಸಂಭವಗಳಿರುವುದರಿಂದ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗೃತಾ ಕ್ರಮವನ್ನು ತೆಗೆದುಕೊಳ್ಳುವುದು ಅತಿ ಅವಶ್ಯವಾಗಿರುತ್ತದೆ. ಜಿಲ್ಲೆಯ ಪ್ರಸಕ್ತ ವಿದ್ಯಮಾನಗಳನ್ನು ಗಣನೆಗೆ ತೆಗೆದುಕೊಂಡು, ಮತ ಎಣಿಕೆ ಕಾರ್ಯವು ಸುಸೂತ್ರವಾಗಿ ನಡೆಯಲು ಹಾಗೂ ಮತ ಎಣಿಕೆ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಯ್ದುಕೊಂಡು ಶಾಂತಿ ಕಾಪಾಡುವ ಸಲುವಾಗಿ ಸಾರ್ವಜನಿಕ ಹಿತದೃಷ್ಟಿಯಿಂದ ಈ ಅವಧಿಯಲ್ಲಿ ಜಿಲ್ಲೆಯಾದ್ಯಂತ ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144ರನ್ವಯ ಪದೆತಿಬಂಧಕಾಜ್ಞೆ ವಿಧಿಸಿ ಪರಿಣಾಮಕಾರಿಯಾಗಿ ನಿಯಂತ್ರಿಸುವುದು ಅವಶ್ಯವೆಂದು ಮಂಗಳೂರು ಜಿಲ್ಲಾಧಿಕಾರಿ ರವಿಕುಮಾರ್ ಎಂ ಆರ್ ತಿಳಿಸಿದ್ದಾರೆ.

Exit mobile version