





ಶಿಶಿಲ: ಮತ್ಸ್ಯತೀರ್ಥ ಪ್ರಖ್ಯಾತ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವವು ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಮೇ.14 ರಿಂದ ಪ್ರಾರಂಭಗೊಂಡು ಮೇ.22 ರವರೆಗೆ ನಡೆಯಲಿದೆ.
ಮೇ.14 ರಾತ್ರಿ ಧ್ವಜಾರೋಹಣದ ಮೂಲಕ ಜಾತ್ರೋತ್ಸವಕ್ಕೆ ಚಾಲನೆ ನೀಡಲಾಯಿತು.ನಂತರ ವಾಸ್ತು ಬಲಿ, ವಾಸ್ತು ರಕ್ಷೋಘ್ನ ಹೋಮ, ವಾಸ್ತು ಪೂಜೆ ನಡೆಯಿತು.



ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಶ್ರೀನಿವಾಸ ಮೂಡತ್ತಾಯ, ಅಭಿವೃದ್ಧಿ ಸಮಿತಿಯ ಸದಸ್ಯ ಆನಂದ ಪೂಜಾರಿ, ಹಾಗೂ ಅರ್ಚಕರು, ವ್ಯವಸ್ಥಾಪನ ಸಮಿತಿಯ ಸದಸ್ಯರು, ಅಭಿವೃದ್ಧಿ ಸಮಿತಿಯ ಸದಸ್ಯರು, ಸಿಬ್ಬಂದಿ ವರ್ಗ, ಊರಿನ ಭಕ್ತಾದಿಗಳು ಉಪಸ್ಥಿತರಿದ್ದರು.









