ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಜಿಲ್ಲಾಡಳಿತ ಸಭೆ ಕರೆಯಬೇಕು: ಪ್ರತಾಪಸಿಂಹ ನಾಯಕ್- ಪತ್ರಿಕಾಗೋಷ್ಠಿ

0

ಬೆಳ್ತಂಗಡಿ: ಈ ಬಾರಿ ಮಳೆಯ ವಿಳಂಬವಾಗಿದ್ದು ದ.ಕ. ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದ್ದು ಕಾಣುತ್ತದೆ ಜನ ಸಾಮಾನ್ಯರು ಸಂಕಷ್ಟ ಎದುರುಸುತ್ತಿದ್ದಾರೆ ಇದರ ಸೂಕ್ತ ಪರಿಹಾರಕ್ಕೆ ಜಿಲ್ಲಾ ಆಡಳಿತ ಮತ್ತು ಸರಕಾರ ಕೂಡಲೇ ಜನಪ್ರತಿನಿದಿನಗಳ ಸಭೆ ಕರೆಯಬೇಕು ಮತ್ತು ಶಾಲಾ ಕಾಲೇಜು ಪ್ರಾರಂಭ ಮುಂದೂಡಬೇಕು ಎಂದು ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಹೇಳಿದರು.ಅವರು ಮೇ.20 ರಂದು ಪ್ರವಾಸಿ ಮಂದಿರದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಈ ಬಾರಿಯ ವಿಧಾನಸಭಾ ಚುನಾವಣೆಯ ಜನರ ತೀರ್ಪನ್ನು ಸ್ವಾಗತಿಸುತ್ತೇವೆ.ಜನರ ತೀರ್ಮಾನವೇ ಅಂತಿಮ ಭಾರತೀಯ ಜನತಾ ಪಕ್ಷ ಪ್ರತಿಪಕ್ಷವಾಗಿ ಜವಾಬ್ದಾರಿ ನಿರ್ವಹಿಸಿ ಜನರ ಅಶೋತ್ತರಗಳಿಗೆ ಸಹಕಾರ ನೀಡಲಿದೆ. ಮೇ.29 ರಂದು ಶಾಲಾ ಕಾಲೇಜು ಆರಂಭದ ಕುರಿತು ಸುತ್ತೋಲೆ ಬಂದಿದೆ.ಆದರೆ ಹವಾಮಾನ ಪ್ರಕಾರ ಜೂನ್ ಮೊದಲ ವಾರದ ನಂತರ ಮುಂಗಾರು ಮಳೆಯ ಸೂಚನೆ ಇದೆ. ಅಲ್ಲದೆ ಈ ವರ್ಷ ಮುಂಗಾರು ಪೂರ್ವ ಮಳೆಯೂ ಬರಲಿಲ್ಲ. ಈ ಹಿನ್ನಲೆಯಲ್ಲಿ ಶಾಲಾ ಕಾಲೇಜು ಪ್ರಾರಂಭದ ಬಗ್ಗೆ ಪುನರ್ ವಿಮರ್ಶೆ ಮಾಡಬೇಕು.ತರಗತಿ ಪ್ರಾರಂಭ ಆದರೆ ದೂರದ ಊರಿನಿಂದ ಬರುವ ವಿದ್ಯಾರ್ಥಿಗಳಿಗೆ ಸಮಸ್ಯೆ ಆಗಲಿದೆ.ಆದುದರಿಂದ ಜಿಲ್ಲಾ ಆಡಳಿತ ಮತ್ತು ಸರಕಾರ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು.

ಮೇ 22 ರಂದು ಬೆಳ್ತಂಗಡಿ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾ ಭವಾನದಲ್ಲಿ ಭಾರತೀಯ ಜನತಾ ಪಕ್ಷದ ವತಿಯಿಂದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮತದಾರರಿಗೆ, ಕಾರ್ಯಕರ್ತರಿಗೆ ಕೃತಜ್ಞತಾ ಸಭೆ ನಡೆಯಲಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ರಾವ್ ಉಪಸ್ಥಿತರಿದ್ದರು.

p>

LEAVE A REPLY

Please enter your comment!
Please enter your name here