ಹೊಕ್ಕಾಡಿಗೋಳಿ: ಸರಕಾರಿ ಶಾಲೆಯ ಮಕ್ಕಳಿಗೂ ಆಧುನಿಕ ಸೌಲಭ್ಯಗಳು ಸಿಕ್ಕಾಗ ಮಕ್ಕಳಲ್ಲಿ ಅತ್ಯುತ್ತಮ ಕಲಿಕೆ ಸಾಧ್ಯವಾಗುತ್ತದೆ ಎಂದು ರೋಟರಿ ಜಿಲ್ಲಾ ಗವರ್ನರ್ ರೊಟೇರಿಯನ್ ಮೇಜರ್ ಡೋನರ್ ಪ್ರಕಾಶ್ ಕಾರಂತ್ ಅಭಿಪ್ರಾಯಪಟ್ಟರು.
ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಹೊಕ್ಕಾಡಿಗೋಳಿಯಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ ಮಾಡಿ ಅವರು ಮಾತನಾಡಿದರು. ರೋಟರಿ ಕ್ಲಬ್ ಸಿದ್ಧಕಟ್ಟೆ ಫಲ್ಗುಣಿ ಹಾಗೂ ಸೆಲ್ಕೋ ಸೋಲಾರ್ ಫೌಂಡೇಶನ್ ವತಿಯಿಂದ ಸೋಲಾರ್ ಸ್ಮಾರ್ಟ್ ಕ್ಲಾಸ್ ಅನ್ನು ಶಾಲೆಯಲ್ಲಿ ಅಳವಡಿಸಲಾಗಿದೆ. ತಂತ್ರಜ್ಞಾನ ಆಧಾರಿತ ಕಲಿಕೆಗೆ ಪೂರಕವಾಗಿ ಈ ಸ್ಮಾರ್ಟ್ ಕ್ಲಾಸ್ ಅನ್ನು ಬಳಸಬಹುದಾಗಿದೆ. ಸೆಲ್ಕೋ ಸೋಲಾರ್ ಕಂಪನಿಯ ಸಿಎಸ್ಆರ್ ನಿಧಿ ಹಾಗೂ ರೋಟರಿ ಸಿದ್ಧಕಟ್ಟೆ ನೇತೃತ್ವದಲ್ಲಿ ಸ್ಥಳೀಯ ದಾನಿಗಳ ಸಹಕಾರದೊಂದಿಗೆ ಜಿಲ್ಲಾ ಗವರ್ನರ್ ಅಧಿಕೃತ ಭೇಟಿಯ ಸಂದರ್ಭದಲ್ಲಿ ಈ ಸ್ಮಾರ್ಟ್ ಕ್ಲಾಸನ್ನು ಅನುಷ್ಠಾನಗೊಳಿಸಲಾಗಿದೆ. ಯೋಜನೆಗೆ ಸಹಕಾರ ನೀಡಿದ ದಾನಿಗಳನ್ನು ಈ ಸಂದರ್ಭದಲ್ಲಿ ಅಭಿನಂದಿಸಲಾಯಿತು.
ರೋಟರಿ ಜಿಲ್ಲಾ ಗವರ್ನರ್ ಮೇಜರ್ ಡೋನರ್ ಪ್ರಕಾಶ್ ಕಾರಂತ್, ಅಸಿಸ್ಟೆಂಟ್ ಗವರ್ನರ್ ಎಲಿಯಾಸ್ ಸ್ಯಾಂಟಿಸ್, ಝೋನಲ್ ಲೆಫ್ಟಿನೆಂಟ್ ರಾಘವೇಂದ್ರ ಭಟ್, ರೋಟರಿ ಜಿಲ್ಲಾ ಆಡಳಿತ ವಿಭಾಗದ ಕಾರ್ಯದರ್ಶಿ ನಾರಾಯಣ ಹೆಗಡೆ, ರೋಟರಿ ಕ್ಲಬ್ ಸಿದ್ಧಕಟ್ಟೆ ಅಧ್ಯಕ್ಷರಾದ ಗಣೇಶ್ ಶೆಟ್ಟಿ, ಸೆಲ್ಕೋ ಫೌಂಡೇಶನ್ ಮ್ಯಾನೇಜರ್ ನವೀನ್, ಮುಖ್ಯ ಶಿಕ್ಷಕರಾದ ಸುಮಿತ್ರಾ ಎಸ್, ಎಸ್. ಡಿ .ಎಂ. ಸಿ ಅಧ್ಯಕ್ಷರಾದ ಸದಾಶಿವ ಪೂಜಾರಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸಂತೋಷ್ ಮಂಜಿಲ, ಪೋಷಕರು, ಹಳೆವಿದ್ಯಾರ್ಥಿಗಳು, ವಿದ್ಯಾಭಿಮಾನಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಶಿಕ್ಷಕರಾದ ರಾಜೇಶ್ ನೆಲ್ಯಾಡಿ ಕಾರ್ಯಕ್ರಮ ನಿರ್ವಹಿಸಿದರು.