


ತೋಟತ್ತಾಡಿ: ತೋಟತ್ತಾಡಿ ಗ್ರಾಮದ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಮೇ.17ರಿಂದ 22ರ ತನಕ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ಜರಗುತ್ತಿದ್ದು, ಈ ಸಂದರ್ಭ ಮೇ.21 ರಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ದೇವಸ್ಥಾನಕ್ಕೆ ಭೇಟಿ ಅಲ್ಲಿ ನಡೆದಿರುವ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿ ಮುಂದಿನ ದಿನಗಳಲ್ಲಿ ದೇವಸ್ಥಾನದಲ್ಲಿ ಇನ್ನಷ್ಟು ಅಭಿವೃದ್ಧಿಗಳು ನಡೆಯಲಿ ಎಂದು ಶುಭ ಹಾರೈಸಿದರು.

ಜೀರ್ಣೋದ್ಧಾರ ಅಧ್ಯಕ್ಷ ಬಾಲಕೃಷ್ಣ ಗೌಡ, ಸಮಿತಿ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಧ್ಯಕ್ಷ ಅಶೋಕ್ ಕುಮಾರ್ ಜೈನ್, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕಮಲಾಕ್ಷ ಪೂಜಾರಿ, ವಿವಿಧ ಸಮಿತಿಗಳ ಪದಾಧಿಕಾರಿಗಳು ಪದಾಧಿಕಾರಿಗಳು, ಊರವರು ಉಪಸ್ಥಿತರಿದ್ದರು.