ಉಜಿರೆ: ಮತ್ಸ್ಯತೀರ್ಥ ಪ್ರಖ್ಯಾತಿಯ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವವು ವೇದಮೂರ್ತಿ ಕೆಮ್ಮಿಂಜೆ ನಾಗೇಶ್ ತಂತ್ರಿಗಳ ನೇತೃತ್ವದಲ್ಲಿ ಮೇ.14 ರಿಂದ ಪ್ರಾರಂಭಗೊಂಡು ಮೇ.22ರವರೆಗೆ ನಡೆಯಲಿದೆ.
ಮೇ.21 ರಂದು ಬೆಳಿಗ್ಗೆ ಶ್ರೀ ಶಿಶಿಲೇಶ್ವರ ದೇವರ ಮೂಲಸ್ಥಾನ ಕುಮಾರಗುಡ್ಡೆಯಲ್ಲಿ ರುದ್ರಾಭಿಷೇಕ, ಮಹಾಪೂಜೆ ಹಾಗೂ ಕುಮಾರಾದಿ ದೈವಗಳಿಗೆ ನೇಮೋತ್ಸವ ನಡೆಯಿತು.
ಮೇ 20 ರಂದು ಸಂಜೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ದೇವರ ದರ್ಶನ ಪಡೆದರು.
ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀನಿವಾಸ ಮೂಡೆತ್ತಾಯ, ಅಭಿವೃದ್ಧಿ ಸಮಿತಿ ಸದಸ್ಯ ಆನಂದ ಪೂಜಾರಿ, ಅರ್ಚಕರು, ವ್ಯವಸ್ಥಾಪನಾ ಸಮಿತಿ ಸದಸ್ಯರು, ಅಭಿವೃದ್ಧಿ ಸಮಿತಿ ಸದಸ್ಯರು, ಸಿಬ್ಬಂದಿಗಳು, ಊರ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.