Site icon Suddi Belthangady

ವಿಶ್ವ ಸ್ಕಿಜೋಫ್ರೇನಿಯಾ (ಛಿದ್ರಮನಸ್ಕತೆ) ದಿನಾಚರಣೆಯ ಅರಿವು ಕಾರ್ಯಕ್ರಮ

ಉಜಿರೆ: ವಿಶ್ವ ಸ್ಕಿಜೋಫ್ರೇನಿಯಾ ದಿನಾಚರಣೆಯ ಅರಿವು ಕಾರ್ಯಕ್ರಮವು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದ.ಕ ಮಂಗಳೂರು, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ ಮಂಗಳೂರು, ತಾಲೂಕು ಆರೋಗ್ಯಾಧಿಕಾರಿ ಕಛೇರಿ ಬೆಳ್ತಂಗಡಿ ಹಾಗೂ ಎಸ್ ಡಿ ಎಂ ಕಾಲೇಜು ಉಜಿರೆ ಇದರ ಸಹಭಾಗಿತ್ವದಲ್ಲಿ ಎಸ್ ಡಿ ಎಂ ಕಾಲೇಜು ಉಜಿರೆಯಲ್ಲಿ ಮೇ 24 ರಂದು ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ, ತಾಲೂಕು ಆರೋಗ್ಯ ಕಚೇರಿ ಬೆಳ್ತಂಗಡಿಯ ಅಮ್ಮಿ ಕೌಟುಂಬಿಕ ಮಾನಸಿಕ ಆರೋಗ್ಯ ನಿರ್ವಹಣೆ ಹಾಗೂ ಮಕ್ಕಳ ಪಾತ್ರದ ಕುರಿತು ಮಾಹಿತಿ ನೀಡಿದರು.ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಮಾನಸ ನರ್ಸಿಂಗ್ ಹೋಮ್ ನ ಮನಃಶಾಸ್ತ್ರಜ್ಞೆ ಪೂಜಾ‌ ಡಿ.ಜಿ ಅವರು ಸ್ಕಿಜೋಫ್ರೇನಿಯಾದ ಬಗ್ಗೆ ಮಾಹಿತಿ ನೀಡಿ, ಮಾನಸಿಕ ಅಸ್ವಸ್ಥ ವ್ಯಕ್ತಿಯ ವೈಯಕ್ತಿಕ, ಸಾಮಾಜಿಕ ಹಾಗೂ ವೃತ್ತಿ ಜೀವನಕ್ಕೆ ಆಗುವ ಪರಿಣಾಮದ ಬಗ್ಗೆ ತಿಳಿಸಿದರು.

ಕಾರ್ಯಕ್ರಮದ ಅಥಿತಿಗಳಾಗಿ ತಾಲೂಕು ಸಾರ್ವಜನಿಕ ಆಸ್ಪತ್ರೆ ಬೆಳ್ತಂಗಡಿಯ ಆಪ್ತಸಮಾಲೋಚಕಿ ರಮ್ಯಾ ಬಿ.ಆರ್ ಅವರು ಮಾನಸಿಕ ಆರೋಗ್ಯ ಸೇವೆಯಲ್ಲಿ ಮನಃಶಾಸ್ತ್ರ ವಿದ್ಯಾರ್ಥಿಗಳ ಪಾತ್ರ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಉಜಿರೆ ಕಾಲೇಜಿನ ಮನಃಶಾಸ್ತ್ರ ವಿಭಾಗದ ಮುಖ್ಯಸ್ಥರು ಡಾ. ವಂದನಾ ಜೈನ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾಲೂಕು ಕಚೇರಿಯ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಪುಷ್ಪ, ಆರೋಗ್ಯ ಸುರಕ್ಷಾಧಿಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಉಜಿರೆಯ ಮೇರಿ ಮ್ಯಾಥ್ಯೂ, ಎಸ್ ಡಿ ಎಂ ಕಾಲೇಜಿನ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಮನಶಾಸ್ತ್ರ ವಿಭಾಗದ ವಿದ್ಯಾರ್ಥಿಗಳಿಂದ ಸ್ಕಿಜೋಫ್ರೇನಿಯಾದ ಕುರಿತು ಕಿರು ನಾಟಕ ಪ್ರದರ್ಶನ ನಡೆಯಿತು.ಕಾರ್ಯಕ್ರಮವನ್ನು ಮನಃಶಾಸ್ತ್ರ ವಿಭಾಗದ ವಿದ್ಯಾರ್ಥಿ ಅನುಶ್ರೀ ನಿರೂಪಿಸಿದರು.

Exit mobile version