ಉಜಿರೆ: ಉಜಿರೆಯ ಎಸ್.ಡಿ.ಎಂ ಸ್ವಾಯತ್ತ ಮಹಾವಿದ್ಯಾಲಯದ ಕನ್ನಡ ಸಂಘ ಮತ್ತು ನಿನಾಸಂ ಪ್ರತಿಷ್ಠಾನ ಹೆಗ್ಗೋಡು ಇವರ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಸಮ್ಯಗ್ದರ್ಶನ ಸಭಾಭವನದಲ್ಲಿ ಮೇ.26 ರಂದು ಕಲಾನುಸಂಧಾನ ಶಿಬಿರದ ರಜತ ವರ್ಷದ ಕಾರ್ಯಕ್ರಮ ನಡೆಯಿತು.ಧರ್ಮಸ್ಥಳ ಶ್ರೀಮತಿ ಹೇಮಾವತಿ ವಿ.ಹೆಗ್ಗಡೆ ಉದ್ಘಾಟಿಸಿ ಶುಭ ಹಾರೈಸಿದರು.
ವಿಮರ್ಶಕ ಪ್ರೊ.ಟಿ.ಪಿ.ಅಶೋಕ, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ.ಎಸ್ ಮಾತನಾಡಿದರು.
ಕಾಲೇಜಿನ ವಿಶ್ರಾಂತ ಕುಲಸಚಿವ ಡಾ.ಬಿ.ಪಿ.ಸಂಪತ್ ಕುಮಾರ್ ರಜತಾವಲೋಕನ ನೆರವೇರಿಸಿದರು.
ಪ್ರಿನ್ಸಿಪಾಲ್ ಡಾ.ಬಿ.ಎ.ಕುಮಾರ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು.
ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ಭೋಜಮ್ಮ ಕೆ.ಎನ್ ಸ್ವಾಗತಿಸಿದರು.ಸಹಾಯಕ ಪ್ರಾಧ್ಯಾಪಕ ಡಾ.ದಿವ ಕೊಕ್ಕಡ ಕಾರ್ಯಕ್ರಮ ನಿರೂಪಿಸಿದರು.ಕಾಲೇಜಿನ ಕನ್ನಡ ಸಂಘದ ಕಾರ್ಯದರ್ಶಿ ಜಯಶ್ರೀ ವಂದಿಸಿದರು.
ನೀನಾಸಂ ಪ್ರತಿಷ್ಠಾನದ ಸಹಕಾರದೊಂದಿಗೆ ಈ ಬಾರಿ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಪ್ರೊ. ಜಸವಂತ ಜಾಧವ್, ಡಾ. ಮಾಧವ ಚಿಪ್ಪಳ್ಳಿ, ವಿದ್ಯಾ ಹೆಗಡೆ,ಡಾ.ಎಂ.ಗಣೇಶ್, ಕೆ.ಎಸ್. ರಾಜಾರಾಮ್, ಶಿಶಿರ ಕೆ.ವಿ.ಮೊದಲಾದವರಿಂದ 2 ದಿನದ ತರಬೇತಿ ಪಡೆಯಲಿರುವರು.