ಮೇಲಂತಬೆಟ್ಟು ಶ್ರೀ ದೇವಿಭಗವತಿ ಅಮ್ಮನವರ ದೇವಸ್ಥಾನದಲ್ಲಿ ದೃಢಕಲಶಾಭಿಷೇಕ: ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಭೇಟಿ

0

ಮೇಲಂತಬೆಟ್ಟು: ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದಲ್ಲಿ ಎ.3ರಿಂದ ಎ.7ರವರೆಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆದಿದ್ದು, ಇದೀಗ ನಲ್ವತ್ತೆಂಟು ದಿನಗಳು ಕಳೆದಿದ್ದು, ಶ್ರೀ ದೇವಿ ಭಗವತಿ ಅಮ್ಮನವರಿಗೆ ದೃಢಕಲಶಾಭಿಷೇಕವು ಮೇ.25 ರಂದು ವಿವಿಧ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಜರುಗಿತು.

ದೃಢಕಲಶದ ಅಂಗವಾಗಿ ಪೂರ್ವಾಹ್ನ ಗಣಹೋಮ, ದೃಢಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಸಾರ್ವಜನಿಕ ಅನ್ನಸಂತರ್ಪಣೆ ಜರುಗಿತು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪರಮಪೂಜ್ಯ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಕ್ಷೇತ್ರಕ್ಕೆ ಭೇಟಿ ನೀಡಿ, ಶ್ರೀ ದೇವಿಭಗವತಿ ಅಮ್ಮನವರ ದರ್ಶನ ಪಡೆದರು. ಕ್ಷೇತ್ರಕ್ಕೆ ಆಗಮಿಸಿದ ಡಾ. ಹೆಗ್ಗಡೆಯವರನ್ನು ಪೂರ್ಣಕುಂಭದೊಂದಿಗೆ ಕ್ಷೇತ್ರದ ಆಡಳಿತ ಮೋಕ್ತೇಸರ ಯೋಗೀಶ್ ಪೂಜಾರಿ ಇವರ ನೇತೃತ್ವದಲ್ಲಿ ಸ್ವಾಗತಿಸಲಾಯಿತು.

ಈ ಸಂದರ್ಭದಲ್ಲಿ ಜೀರ್ಣೋದ್ಧಾರ, ಬ್ರಹ್ಮಕಲಶೋತ್ಸವ, ಪೂಜಾ ಮತ್ತು ಭಜನಾ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಗತಿಬಂಧು ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here