ಲಾಯಿಲ: ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

0

ಬೆಳ್ತಂಗಡಿ: ಲಾಯಿಲ ಗ್ರಾಮ‌ ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಗ್ರಂಥಾಲಯದ ಸಹಯೋಗದಲ್ಲಿ ಮೇ.19 ರಿಂದ 27ರವರೆಗೆ ಆಯೋಜಿಸಲಾದ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವು ಮೇ.27 ರಂದು ಲಾಯಿಲ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರಗಿತು.

ಮಕ್ಕಳಿಗೆ ಪ್ರಮಾಣ ಪತ್ರ, ಬಹುಮಾನ ಹಾಗೂ ಸುಗಮಗಾರರಿಗೆ ಪ್ರಶಂಸಾ ಪತ್ರ ವಿತರಿಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಪಂಚಾಯತ್ ಅಧ್ಯಕ್ಷರಾದ ಬೆನೆಡಿಕ್ಟ ಸಲ್ಡಾನ ವಹಿಸಿದ್ದರು.

ಸಭೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ ಶ್ರೀ ಪ್ರಕಾಶ್ ಶೆಟ್ಟಿ, ಲೆಕ್ಕ ಸಹಾಯಕರಾದ ಸುಪ್ರಿತಾ ಎಸ್ ಶೆಟ್ಟಿ, ಉಪಾಧ್ಯಕ್ಷರಾದ ಗಣೇಶ್, ಪಂಚಾಯತ್ ಸದಸ್ಯರಾದ ಆಶಾಲತಾ, ಮಹೇಶ್, ಆರ್ಥಿಕ ಸಮಾಲೋಚಕರಾದ ಉಷಾ, ಗ್ರಂಥಾಲಯ ಮೇಲ್ವಿಚಾರಕಿ, ಪಂಚಾಯತ್ ಸಿಬ್ಬಂದಿಗಳು, ಸಂಜೀವಿನಿ ಒಕ್ಕೂಟ ಅಧ್ಯಕ್ಷರು ಉಪಸ್ಥಿತರಿದ್ದರು.

ಪಂಚಾಯತ್ ಲೆಕ್ಕ ಸಹಾಯಕರಾದ ಸುಪ್ರಿತಾ ಎಸ್ ಶೆಟ್ಟಿ ಇವರು ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

ಮಕ್ಕಳು ಬೇಸಿಗೆ ಶಿಬಿರದ ಕುರಿತು ತಮ್ಮ ಅನಿಸಿಕೆ ಹಂಚಿಕೊಂಡರು.ಮಕ್ಕಳಿಗೆ ಮಧ್ಯಾಹ್ನ ಭೋಜನದ ವ್ಯವಸ್ಥೆ ಮಾಡಲಾಗಿತ್ತು.

LEAVE A REPLY

Please enter your comment!
Please enter your name here