ಉಜಿರೆ: ಕೊಲ್ಲಿ ಶ್ರೀ ದುರ್ಗಾ ದೇವಸ್ಥಾನದಲ್ಲಿ ಜೀಣೋದ್ಧಾರ ಕಾರ್ಯಕ್ರಮದ ಅಂಗವಾಗಿ ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವರ ಸನ್ನಿಧಾನದಿಂದ ಶಿಲಾಮಯ ಧ್ವಜಸ್ತಂಭವನ್ನು ಭವ್ಯವಾದ ಮೆರವಣಿಗೆಯೊಂದಿಗೆ ಮೇ.28 ರಂದು ಚಾಲನೆ ನೀಡಲಾಯಿತು.
ಉಜಿರೆ ಜನಾರ್ಧನ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆದು, ಬಳಿಕ ಉಜಿರೆ ಶ್ರೀ ಜನಾರ್ದನ ದೇವಸ್ಥಾನ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ ಇವರು ಮೆರವಣಿಗೆಗೆ ಚಾಲನೆ ನೀಡಿದರು.
ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್,ಕೊಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಾಸುದೇವ ರಾವ್ ಕಕ್ಕೆನೇಜಿ, ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಬಿ.ಕೆ. ಲೋಕೇಶ್ ರಾವ್, ಪ್ರಧಾನ ಕಾರ್ಯದರ್ಶಿ ದಿನೇಶ್ ಗೌಡ ದಿಡುಪೆ, ಸಲಹೆಗಾರ ಧನಂಜಯ ರಾವ್ ಬಿ.ಕೆ.ಮಹಿಳಾ ಸಮಿತಿ ಅಧ್ಯಕ್ಷೆ ಜ್ಯೋತಿ ಲಕ್ಷ್ಮೀ, ಎಲ್ಲಾ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಊರ ಭಕ್ತರು ಉಪಸ್ಥಿತರಿದ್ದರು.
ಉಜಿರೆ ಶ್ರೀ ಜನಾರ್ದನ ದೇವಸ್ಥಾನದಿಂದ ಕಿಲ್ಲೂರು ಪೇಟೆಯ ವರೆಗೆ ವಾಹನದ ಮೂಲಕ ಚೆಂಡೆ, ನಾಸಿಕ್ ಬ್ಯಾಂಡ್, ಗೊಂಬೆಯ ಭವ್ಯ ಮೆರವಣಿಗೆಯಾಂದಿಗೆ ಸಾಗಿತು. ಕಿಲ್ಲೂರು ಪೇಟೆಯಿಂದ ಕಾಲ್ನಡಿಗೆಯ ಮೆರವಣಿಗೆ ಮೂಲಕ ಕೊಲ್ಲಿ ಶ್ರೀ ದುರ್ಗಾದೇವಿ ಸನ್ನಿಧಾನಕ್ಕೆ ಸಾಗಲಿದೆ.