ಬೆಳಾಲು: ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ಒಕ್ಕೂಟದ ಸಭೆ ಮತ್ತು ಮಾಹಿತಿ ಕಾರ್ಯಾಗಾರ

0

ಬೆಳಾಲು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳಾಲು ಒಕ್ಕೂಟದ ಸಭೆ ಮತ್ತು ವಿವಿಧ ಮಾಹಿತಿ ಕಾರ್ಯಾಗಾರ ಮೇ.28 ರಂದು ಬೆಳಾಲು ಶ್ರೀ ಧ. ಮ. ಪ್ರೌಢ ಶಾಲೆಯಲ್ಲಿ ಒಕ್ಕೂಟದ ಅಧ್ಯಕ್ಷ ಸಂಜೀವ ಗೌಡರ ಅಧ್ಯಕ್ಷತೆಯಲ್ಲಿ ನಡೆಯಿತು.

ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಸುರೇಂದ್ರ ಸಂಘ ಹೊಸ ನಿಯಮದ ಕುರಿತು ವಿವಿಧ ಯೋಜನೆಗಳ ಕುರಿತು ಮಾಹಿತಿ ನೀಡಿದರು.ಜನಜಾಗೃತಿ ವೇದಿಕೆಯ ಶಿಬಿರಾಧಿಕಾರಿ ರಾಜೇಶ್ ವಿಶ್ವ ತಂಬಾಕು ದಿನಾಚರಣೆಯ ಬಗ್ಗೆ ಮಾಹಿತಿ ನೀಡಿದರು.ತಾಲೂಕು ನೋಡಲಾಧಿಕಾರಿ ಪ್ರಶಾಂತ್ ಟೆಲಿ ಕಾನೂನು ಬಗ್ಗೆ ಮಾಹಿತಿ ನೀಡಿದರು.

ಸೇವಾ ಕೇಂದ್ರದ ಪ್ರತಿನಿಧಿ ಶ್ರುತಿ, ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

ವಲಯ ಮೇಲ್ವಿಚಾರಕಿ ವನಿತಾ ಕಾರ್ಯಕ್ರಮ ನಿರೂಪಿಸಿದರು. ನವ್ಯ ಶ್ರೀ ತಂಡದ ಡೀಕಮ್ಮ ಸ್ವಾಗತಿಸಿ ಸೇವಾ ಪ್ರತಿನಿಧಿ ಆಶಾ ವಂದಿಸಿದರು.

LEAVE A REPLY

Please enter your comment!
Please enter your name here