ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಅರುಣ್ ಕುಮಾರ್ ಪುತ್ತಿಲ ಭೇಟಿ

0

ಕೊಕ್ಕಡ: ಪುತ್ತೂರಿನ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಅವರು ಮೇ.28 ರಂದು ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ನಂತರ ಸೌತಡ್ಕ ಮಹಾಗಣಪತಿ ದೇವಸ್ಥಾನಕ್ಕೆ ತೆರಳಿ, ಅಭಿಮಾನಿಗಳ ಪ್ರೇರಣೆಯಂತೆ ದೇವಸ್ಥಾನದಲ್ಲಿ ಪುತ್ತಿಲರ ಪರವಾಗಿ ಚುನಾವಣಾ ಸಂದರ್ಭದಲ್ಲಿ ರಂಗಪೂಜೆ ಹರಕೆಯನ್ನು ಹೊತ್ತಿದ್ದರು.

ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ದೇವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಿ ನಂತರ ಕಾರ್ಯಕರ್ತರೊಂದಿಗೆ ಸಮಾಲೋಚನೆ ಸಭೆ ನಡೆಸಿದರು. ಅಪಾರ ಪ್ರಮಾಣದಲ್ಲಿ ಅಭಿಮಾನಿಗಳು ಸೇರಿದ್ದರು.

LEAVE A REPLY

Please enter your comment!
Please enter your name here