Site icon Suddi Belthangady

ವೇಣೂರು ಸ. ಪ. ಪೂ. ಕಾಲೇಜು ಪ್ರೌಢ ಶಾಲಾ ವಿಭಾಗದಲ್ಲಿ ಪ್ರಾರಂಭೋತ್ಸವ

ವೇಣೂರು :ಸ. ಪ. ಪೂ. ಕಾಲೇಜು ಪ್ರೌಢಶಾಲಾ ವಿಭಾಗ ವೇಣೂರುನಲ್ಲಿ ಮೇ 31 ರಂದು ಈ ಸಾಲಿನ ಶಾಲಾ ಪ್ರಾರಂಭೋತ್ಸವ ಜರುಗಿತು.

ಗ್ರಾಮ ಪಂಚಾಯತ್ ಅಧ್ಯಕ್ಷ ನೇಮಯ್ಯ ಕುಲಾಲ್ ಇವರು ದೀಪ ಬೆಳಗಿಸಿ, ಶುಭ ಕೋರಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಎಸ್. ಡಿ. ಎಂ. ಸಿ ಸದಸ್ಯರು, ಪಂಚಾಯತ್ ಸದಸ್ಯರು ಹಾಜರಿದ್ದರು. ನೂತನವಾಗಿ ದಾಖಲಾದ ಮಕ್ಕಳನ್ನು ಬ್ಯಾಂಡ್ ವಾದನದೊಂದಿಗೆ ಮೆರವಣಿಗೆಯಲ್ಲಿ ಸ್ವಾಗತಿಸಲಾಯಿತು, ಪಠ್ಯ ಪುಸ್ತಕ ಹಾಗೂ ಸಮವಸ್ತ್ರ ವಿತರಿಸಲಾಯಿತು.
.

Exit mobile version