ಬೆಳಾಲು ಪ್ರೌಢಶಾಲೆಯಲ್ಲಿ ಉಚಿತ ಬರೆಯುವ ಪುಸ್ತಕ ವಿತರಣೆ

0

ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ, ಉಜಿರೆ ಶ್ರೀ ಧ ಮಂ ಎಜ್ಯುಕೇಶನಲ್ ಸೊಸೈಟಿಯ(ರಿ.) ವತಿಯಿಂದ ಉಚಿತವಾಗಿ ನೀಡಲ್ಪಟ್ಟ ಬರೆಯುವ ಪುಸ್ತಕ ವಿತರಣಾ ಕಾರ್ಯಕ್ರಮ ಮೇ 31 ರಂದು ಜರಗಿತು.

ಮುಖ್ಯೋಪಾಧ್ಯಾಯ ರಾಮಕೃಷ್ಣ ಭಟ್ ರವರ ಅಧ್ಯಕ್ಷತೆಯಲ್ಲಿ ಜರಗಿದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿ ಪುಸ್ತಕ ವಿತರಿಸಿ ಮಾತನಾಡುತ್ತಾ, ವಿದ್ಯೆ ನಮಗೆ ಅವಕಾಶವನ್ನೂ ಸ್ಥಾನವನ್ನೂ ಒದಗಿಸಿಕೊಡುತ್ತದೆ. ವಿದ್ಯಾರ್ಥಿಗಳು ಪರಿಶ್ರಮದಿಂದ ಅಧ್ಯಯನ ಮಾಡುವುದರ ಜೊತೆಗೆ ಸಾಂಸ್ಕೃತಿಕ ಅಭಿರುಚಿಗಳನ್ನೂ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು. ಇನ್ನೋರ್ವ ಅತಿಥಿಗಳಾದ ಶಿಕ್ಷಕ ರಕ್ಷಕ ಸಮಿತಿಯ ಅಧ್ಯಕ್ಷ ಸುಲೈಮಾನ್ ಭೀಮಂಡೆಯವರು ಶುಭಕೋರಿದರು.

ವೇದಿಕೆಯಲ್ಲಿ ಶಿಕ್ಷಕ ಸಿಬ್ಬಂದಿಗಳೆಲ್ಲರು ಉಪಸ್ಥಿತರಿದ್ದರು. ಕಾರ್ಯಕ್ರಮ ನಿರೂಪಿಸಿದ ಶಿಕ್ಷಕರಾದ ಸುಮನ್ ಸ್ವಾಗತಿಸಿ, ವಾರಿಜಾ ಎಸ್ ಗೌಡ‌ ವಂದಿಸಿದರು.

ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ವತಿಯಿಂದ ಅರವತ್ತು ಸಾವಿರಕ್ಕಿಂತ ಅಧಿಕ ಮೌಲ್ಯದ ಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.

p>

LEAVE A REPLY

Please enter your comment!
Please enter your name here