ಲಾಯಿಲ ಶಾಲಾ ಪ್ರಾರಂಭೋತ್ಸವ

0

ಲಾಯಿಲ:ಸ.ಹಿ.ಪ್ರಾ. ಶಾಲೆ ಕರ್ನೋಡಿ, ಲಾಯಿಲದಲ್ಲಿ ಶಾಲಾ ಪ್ರಾರಂಭೋತ್ಸವ ಮೇ 31ರಂದು ಸಂಭ್ರಮದಿಂದ ನಡೆಯಿತು. ಲಾಯಿಲ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಆಶಾ ಬೆನೆಡಿಕ್ವ ಸಲ್ದಾನರವರ ಉಪಸ್ಥಿತಿಯಲ್ಲಿ ವಿದ್ಯಾರ್ಥಿಗಳಿಗೆ ಗುಲಾಬಿ ಹೂ ಮತ್ತು ಸಿಹಿ ತಿಂಡಿಯನ್ನು ನೀಡಿ ಆತ್ಮೀಯವಾಗಿ ಸ್ವಾಗತಿಸಲಾಯಿತು.

ನಂತರ ನಡೆದ ಸಭಾಕಾರ್ಯಕ್ರಮವನ್ನು ಲಾಯಿಲ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಸುಗಂಧಿ ಜಗನ್ನಾಥರವರು ಉದ್ಘಾಟಿಸಿದರು. SDMC ಅಧ್ಯಕ್ಷರಾದ ಶ್ರೀಮತಿ ಸೌಮ್ಯರವರು ಸಭೆಯ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದರು. ಈ ಸಂದರ್ಭದಲ್ಲಿ ದಾನಿಗಳಾದ ನಿವೃತ್ತ ಮುಖ್ಯ ಶಿಕ್ಷಕರಾದ ಶ್ರೀಮತಿ ಕುಸುಮಾವತಿ, ಶ್ರೀ ಸದಾಶಿವ, ಲಾಯಿಲದ ಅಯ್ಯಂಗಾರ್ ಬೇಕರಿ ಮಾಲಕರಾದ ಶ್ರೀ ರಘುರವರು ವಿದ್ಯಾರ್ಥಿಗಳಿಗೆ ಬರೆಯುವ ಪುಸ್ತಕ, ಪೆನ್ನುಗಳನ್ನು ವಿತರಿಸಿದರು. ಜೊತೆಗೆ ಇಲಾಖೆಯು ಉಚಿತ ಪಠ್ಯಪುಸ್ತಕ ಮತ್ತು ಸಮವಸ್ತ್ರವನ್ನು ವಿತರಿಸಲಾಯಿತು.

ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಜಗನ್ನಾಥರವರು ಎಲ್ಲರನ್ನು ಸ್ವಾಗತಿಸಿದರು. ಸಹಶಿಕ್ಷಕಿಯಾದ ಶ್ರೀಮತಿ ಗಂಗಾರಾಣಿಯವರು ಪ್ರಾಸ್ತಾವಿಕವಾಗಿ ಮಾತನಾಡಿದರು.ಪದವೀಧರ ಪ್ರಾಥಮಿಕ ಶಿಕ್ಷಕಿಯಾದ ಉಷಾ.ಕೆ ಧನ್ಯವಾದವನ್ನು ಸಮರ್ಪಿಸಿದರು.ಪ್ರೌಢಶಾಲಾ ಸಹಶಿಕ್ಷಕರಾದ ಶ್ರೀ ಕೃಷ್ಣಕುಮಾರ್ ರವರು ಕಾರ್ಯಕ್ರಮವನ್ನು ನಿರೂಪಿಸಿದರು.ಈ ಸಂದರ್ಭದಲ್ಲಿ ಅತಿಥಿ ಶಿಕ್ಷಕರಾದ ಶೀಮತಿ ವನಿತಾ, ಕುಮಾರಿ ರಮ್ಯಾ ಜಿ ರವರು ಸಹಕರಿಸಿದರು. ಈ ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಸದಸ್ಯರು, ಹಳೆವಿದ್ಯಾರ್ಥಿ ಸಂಘದ ಸದಸ್ಯರು, ವಿದ್ಯಾರ್ಥಿಗಳ ಪೋಷಕರು, ವಿದ್ಯಾರ್ಥಿಗಳು ಮತ್ತು ಅಡುಗೆ ಸಿಬ್ಬಂದಿಯವರು ಉಪಸ್ಥಿತರಿದ್ದರು.ಮದ್ಯಾಹ್ನದ ಬಿಸಿಯೂಟದ ಜೊತೆಗೆ ಸಿಹಿಯೂಟವನ್ನು ಶ್ರೀ ಸದಾಶಿವರವರು ನೀಡಿ ಸಹಕರಿಸಿದರು.

LEAVE A REPLY

Please enter your comment!
Please enter your name here