Site icon Suddi Belthangady

ಹೊಸಂಗಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

ಹೊಸಂಗಡಿ: ಹೊಸಂಗಡಿ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಜೂನ್ 1 ರಂದು ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಕರುಣಾಕರ ಪೂಜಾರಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.

ಬೆಳ್ತಂಗಡಿ ತೋಟಗರಿಕಾ ಇಲಾಖೆಯ ಹಿರಿಯ ನಿರ್ದೇಶಕ ಚಂದ್ರಶೇಖರ್ ಮಾರ್ಗದರ್ಶ ಅಧಿಕಾರಿಯಾಗಿ ಸಭೆಯನ್ನು ಮುನ್ನಡೆಸಿದರು.

ಗ್ರಾಮ ಪಂಚಾಯತ್ ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು,ಪಂಚಾಯತ್ ವ್ಯಾಪ್ತಿಯ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು, ಗ್ರಾಮಸ್ಥರು ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ ಸ್ವಾಗತಿಸಿ ವರದಿ, ಲೆಕ್ಕ ಪತ್ರ ವಾಚಿಸಿದರು. ಸಿಬ್ಬಂದಿಗಳು ಸಹಕರಿಸಿದರು. ಸಭೆಯಲ್ಲಿ ವಾರ್ಡ್ ಸಭೆಯಲ್ಲಿ ಬಂದ ಬೇಡಿಕೆಗಳನ್ನು ಓದಿ ಅನುಮೋದನೆ ಪಡೆಯಲಾಯಿತು. ಇಲಾಖೆಯ ಅಧಿಕಾರಿಗಳು ಇಲಾಖೆಯ ಮಾಹಿತಿ ನೀಡಿದರು.

Exit mobile version